ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಅದರಲ್ಲೂ ಮಲೆನಾಡು ಭಾಗಗಳಲ್ಲಿ ವರುಣನ ಆರ್ಭಟ ಇನ್ನೆರಡು ದಿನ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ನಾಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ 7 ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಭಾರೀ ಮಳೆ ಮುನ್ಸೂಚನೆ ಇರುವುದರಿಂದ ನದಿ, ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಸೂಚಿಸಲಾಗಿದೆ. ಇನ್ನು ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜಿಗೆ ಎಂದಿನಂತೆ ತರಗತಿ ನಡೆಯಲಿದೆ. ಇನ್ನು ಕೊಡಗಿನಲ್ಲೂ ಇನ್ನೆರಡು ದಿನಗಳಲ್ಲಿ ಭಾರೀ ಮಳೆಯಾಗಲಿದ್ದು, ಜನಜೀವನ ಅಸ್ತವ್ಯಸ್ತವಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.
ಮಳೆಯ ಪ್ರಮಾಣ ನೋಡಿಕೊಂಡು ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾಯ ಜಿಲ್ಲೆಯ ಜಿಲ್ಲಾಧಿಕಾರಿಗೆ ನೀಡಿದ್ದು, ಮಳೆ ಜಾಸ್ತಿಯಾದರಷ್ಟೇ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರು ಕೆಲಸದ ವೇಳೆಯಲ್ಲಿ ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಸಾರ್ವಜನಿಕರು ತಮ್ಮ ಕೆಲಸಕ್ಕೆಂದು ಕಚೇರಿಗಳಿಗೆ ಹೋದರೆ…
ಎಚ್.ಡಿ.ಕೋಟೆ ತಾಲ್ಲೂಕಿನಿಂದ ಹ್ಯಾಂಡ್‌ಪೋಸ್ಟ್ ಮಾರ್ಗವಾಗಿ ಮಾದಾಪುರ ಕಡೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಬೆಳಿಗ್ಗೆ ೬.೩೦ಕ್ಕೆ , ಮಧ್ಯಾಹ್ನ…
ಇತ್ತೀಚಿನ ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆಯಲ್ಲಿ ಸುಮಾರು ೩೭ ಅಂಕಗಳ ಪ್ರಶ್ನೆಗಳು ಪಠ್ಯಕ್ರಮಕ್ಕೆ ಹೊರತಾಗಿರುವುದು ಅಥವಾ ಅತೀವ ಕ್ಲಿಷ್ಟಕರವಾಗಿರುವುದು ಶಿಕ್ಷಣ ಇಲಾಖೆಯ…
ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದಿಂದಾಗಿ ಪಿಎನ್‌ಜಿ (ಪೈಪ್ಡ್ ನ್ಯಾಚುರಲ್ ಗ್ಯಾಸ್) ಸಂಪರ್ಕ ಹೊಂದಿದ್ದವರ ಮನೆಗಳಲ್ಲಿರುವ ಎಲ್‌ಪಿಜಿ ಸಿಲಿಂಡರ್‌ಗಳನ್ನು…
ಹೆಚ್.ಎಸ್. ದಿನೇಶ್‌ಕುಮಾರ್ ಚುನಾಯಿತ ಪ್ರತಿನಿಧಿಗಳಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ದರ್ಬಾರು ಮೈಸೂರು: ಜವಾಬ್ದಾರಿಯುತ ಹಾಗೂ ಜನರ ಪರ ಆಲೋಚಿಸುವ ಜನಪ್ರತಿನಿಧಿಗಳಿಲ್ಲದಿದ್ದಲ್ಲಿ ಏನೆಲ್ಲಾ…