Mysore
22
clear sky

Social Media

ಸೋಮವಾರ, 30 ಮಾರ್ಚ್ 2026
Light
Dark

ರಾಜ್ಯದಲ್ಲಿ ಮುಂದಿನ 48 ಗಂಟೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲ ದಿನಗಳಿಂದ ಅಬ್ಬರಿಸಿ ಬೊಬ್ಬರಿದಿದ್ದ ಮಳೆ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯಲಿದ್ದು, ಮುಂದಿನ 48 ಗಂಟೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಕರಾವಳಿಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ವ್ಯಾಪಕ ಮಳೆಯಾಗಲಿದ್ದು, ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ಉಳಿದಂತೆ ಬೆಳಗಾವಿ, ಬೀದರ್‌, ಕಲಬುರ್ಗಿ, ಯಾದಗಿರಿ, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದ್ದು, ಅಲ್ಲಲ್ಲಿ ಬಿಟ್ಟು ಬಿಡದೇ ಧಾರಾಕಾರ ಮಳೆ ಆಗಲಿದೆ. ಪರಿಣಾಮ ಇಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಜುಲೈ.23ರಿಂದ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಲಿರುವ ಪರಿಣಾಮ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ವಾಯುಭಾರ ಕುಸಿತದಿಂದ ಚಳಿ ಹೆಚ್ಚಾಗಲಿರುವ ಕಾರಣ ಮಹಿಳೆಯರು, ಮಕ್ಕಳು, ವೃದ್ಧರು ಆರೋಗ್ಯದ ಕಡೆಗೆ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ.

Tags:
error: Content is protected !!