ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲ ದಿನಗಳಿಂದ ಅಬ್ಬರಿಸಿ ಬೊಬ್ಬರಿದಿದ್ದ ಮಳೆ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯಲಿದ್ದು, ಮುಂದಿನ 48 ಗಂಟೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ವ್ಯಾಪಕ ಮಳೆಯಾಗಲಿದ್ದು, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಉಳಿದಂತೆ ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದ್ದು, ಅಲ್ಲಲ್ಲಿ ಬಿಟ್ಟು ಬಿಡದೇ ಧಾರಾಕಾರ ಮಳೆ ಆಗಲಿದೆ. ಪರಿಣಾಮ ಇಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಜುಲೈ.23ರಿಂದ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಲಿರುವ ಪರಿಣಾಮ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ವಾಯುಭಾರ ಕುಸಿತದಿಂದ ಚಳಿ ಹೆಚ್ಚಾಗಲಿರುವ ಕಾರಣ ಮಹಿಳೆಯರು, ಮಕ್ಕಳು, ವೃದ್ಧರು ಆರೋಗ್ಯದ ಕಡೆಗೆ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…