ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಕಾಂಗ್ರೆಸ್ ಪಾಳಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕಳೆದ ಕೆಲವು ದಿನಗಳಿಂದ ಮತ್ತೆ ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ನಡುವಲ್ಲೇ ಮುಂದಿನ 5 ವರ್ಷ ನಾನೇ ಸಿಎಂ ಎಂದು ಹೇಳಿದ್ದ ಸಿದ್ದರಾಮಯ್ಯ ಅವರು, ಇದೀಗ ಯೂ ಟರ್ನ್ ಹೊಡೆದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ಹೈಕಮಾಂಡ್ ಪಕ್ಷ. ನಾನು ನೀಡಿದ್ದ ಹೇಳಿಕೆಯೇ ಬೇರೆ. ನಾನು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದೆ. ಆದರೆ, ತಪ್ಪಾಗಿ ವರದಿಯಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಗುರುವಾರ ವಿಜಯನಗರದಲ್ಲಿ ಮಾತನಾಡಿದ್ದ ಸಿಎಂ, 5 ವರ್ಷ ನಮ್ಮದೇ ಸರ್ಕಾರ ಇರುತ್ತದೆ. ಈಗ ನಾನು ಮುಖ್ಯಮಂತ್ರಿ, ನಾನೇ ಮುಂದುವರಿಯುತ್ತೇನೆ ಎಂದು ಹೇಳಿಕೆ ನೀಡಿದ್ದರು.
ಈ ಹೇಳಿಕೆ ನೀಡಿದ ಬಳಿಕ ಶುಕ್ರವಾರ ಗದಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಒಂದೇ ವೇದಿಕೆಯಲ್ಲಿ ಕುಳಿತಿದ್ದರೂ ಪರಸ್ಪರ ಮಾತನಾಡಿರಲಿಲ್ಲ. ಇಬ್ಬರೂ ಕಾರ್ಯಾಕ್ರಮದ ಆರಂಭದಿಂದ ಅಂತ್ಯದವರೆಗೂ ತುಟಿ ಬಿಚ್ಚದೇ ಇದ್ದದ್ದು ಹಲವರ ಹುಬ್ಬೇರುವಂತೆ ಮಾಡಿತ್ತು. ಸಿಎಂ ಹೇಳಿಕೆಯಿಂದ ಡಿಕೆ.ಶಿವಕುಮಾರ್ ಮುನಿಸಿಕೊಂಡಿರುವಂತೆ ಭಾಸವಾಗಿತ್ತು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…