ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಹವಾಮಾನ ವೈಪರೀತ್ಯ ಕಾಣಿಸಿಕೊಂಡ ಪರಿಣಾಮ ರಾಜ್ಯದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ಹವಾಮಾನ ವೈಪರೀತ್ಯ ಕಾಣಿಸಿಕೊಂಡಿದ್ದು, ಭಾರೀ ಗಾಳಿ ಬೀಸುತ್ತಿದೆ. ಪರಿಣಾಮ ಮುಂದಿನ ಐದು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಮತ್ತು ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನೂ ಮಂಡ್ಯ, ಮೈಸೂರು, ಕೊಡಗು, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲೂ ಅತ್ಯಧಿಕ ಮಳೆಯಾಗಲಿದೆ. ವಿಶೇಷವಾಗಿ ಕೊಡಗಿನಲ್ಲಿ ಇನ್ನೆರಡು ದಿನ ಧಾರಾಕಾರ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೊಡಗಿನಲ್ಲಿ ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದ್ದು, ನದಿಗಳ ಬಳಿಗೆ ತೆರಳದಂತೆ ಸೂಚನೆ ನೀಡಲಾಗಿದೆ. ಇನ್ನೆರಡು ದಿನ ಕೊಡಗಿನ ಜನತೆ ಬಹಳ ಎಚ್ಚರಿಕೆ ವಹಿಸುವಂತೆ ಕೊಡಗು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.