ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ಕಾಲ ಭರ್ಜರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಕೆಲವು ದಿನಗಳ ಹಿಂದೆ ಅಬ್ಬರಿಸಿದ್ದ ಮುಂಗಾರು ಮಳೆ ಸದ್ಯಕ್ಕೆ ಹಲವು ಜಿಲ್ಲೆಗಳಲ್ಲಿ ತಣ್ಣಗಾಗುವ ಮುನ್ಸೂಚನೆ ನೀಡಿದೆ. ಹವಾಮಾನದಲ್ಲಿನ ಬದಲಾವಣೆ ಸಂದರ್ಭದಲ್ಲಿ ಕಳೆದ ಶನಿವಾರದಿಂದ ಮಲೆನಾಡು, ಕರಾವಳಿಯಲ್ಲಿ ಭಾರೀ ಆರ್ಭಟ ಮುಂದುವರೆಸಿತ್ತು. ಇದೇ ವೇಳೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿಗೆ ಮಳೆ ಆಗಿರಲಿಲ್ಲ.
ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ ಆರ್ಭಟ ಶುರುಮಾಡಲಿದ್ದಾನೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಮುಂಗಾರು ಮಳೆ ಶಾಕ್ ನೀಡಿದೆ. ಕೇವಲ ಕರ್ನಾಟಕ ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಬರುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳ ಪೈಕಿ ಮೊದಲ ಮೂರು ದಿನ ಅಂದರೆ ಇಂದಿನಿಂದ ಜುಲೈ.5ರವರೆಗೆ ಸಾಧಾರಣದಿಂದ ಮಳೆ ಆಗಲಿದೆ. ಹೀಗಾಗಿ ಮೂರು ಜಿಲ್ಲೆಗಳಿಗೆ ಮಾತ್ರ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ನಂತರ ಎರಡು ದಿನ ಕರಾವಳಿಯಲ್ಲೇ ಮಳೆ ತೀವ್ರಗೊಳ್ಳಲಿದೆ. ಜುಲೈ.6 ಮತ್ತು 7ರಂದು ಕರಾವಳಿಯ ಇದೇ ಮೂರು ಜಿಲ್ಲೆಗಳಿಗೆ ಅತ್ಯಧಿಕ ಮಳೆ ಆಗುವ ಲಕ್ಷಣವಿದೆ. ಆದ್ದರಿಂದ ಈ ಎರಡು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.
ಇನ್ನೂ ಮುಂದಿನ ಐದು ದಿನಗಳಲ್ಲಿ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಇಲ್ಲಿ ಜೋರಾಗಿದ್ದ ಮಳೆಯಬ್ಬರ ಇದೀಗ ಇಳಿಕೆ ಆಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ತುಮಕೂರು, ದಾವಣಗೆರೆ, ಬಳ್ಳಾರಿ, ಕೋಲಾರ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಸಾಮಾನ್ಯ ಮಳೆ ಬರುವ ಮುನ್ಸೂಚನೆಯಿದೆ.
ಇನ್ನೂ ವಿಪರ್ಯಾಸವೆಂದರೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸುಸೂತ್ರವಾಗಿ ಮಳೆ ಆಗುತ್ತಿಲ್ಲ. ಇಲ್ಲಿ ಕೆಲವು ಜಿಲ್ಲೆಗಳಲ್ಲಿ ಮಳೆ ಬಂದರೆ ಮತ್ತೆ ಕೆಲವು ಜಿಲ್ಲೆಗಳಿಗೆ ಮಳೆಯೇ ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರೈತರು ಉತ್ತಮ ಮಳೆಗೆ ಕಾಯುತ್ತಿದ್ದಾರೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…