Mysore
19
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ರಾಜ್ಯದಲ್ಲಿ ಇನ್ನೂ 6 ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ 6 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇನ್ನು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಇನ್ನು 4 ದಿನ ಸಂಜೆ ವೇಳೆಗೆ ಮಳೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಭಾರೀ ಮಳೆಯಾಗಲಿದೆ ಎಂಬ ಹವಾಮಾನ ಇಲಾಖೆ ಸೂಚನೆ ಮೇರೆಗೆ ರಾಜ್ಯದ ಜಲಾಶಯಗಳಿಗೆ ಮತ್ತೆ ಒಳಹರಿವು ಹೆಚ್ಚಾಗಲಿದ್ದು, ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗುತ್ತದೆ.

ಈ ಹಿನ್ನೆಲೆಯಲ್ಲಿ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನತೆ ಬಹಳ ಎಚ್ಚರಿಕೆಯಿಂದ ಇರಬೇಕು. ತಮ್ಮ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಬೇಕು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಕಳೆದ ಮೂರು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆರಾಯ ಮತ್ತೆ ನಾಲ್ಕು ದಿನಗಳ ಕಾಲ ತನ್ನ ಆರ್ಭಟ ಶುರುಮಾಡಲಿದ್ದು, ಏನೆಲ್ಲಾ ಅವಾಂತರ ಸೃಷ್ಟಿಸಲಿದ್ದಾನೆ ಎಂಬುದನ್ನು ಕಾದುನೋಡಬೇಕಿದೆ.

Tags: