ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಪೂರ್ವ ಮುಂಗಾರು ಫುಲ್ ಆಕ್ಟೀವ್ ಆಗಿದೆ. ನಿನ್ನೆ ರಾಜ್ಯದ ಹಲವೆಡೆ ಆಲಿಕಲ್ಲು, ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಕಾದು ಬಸವಳಿದಿದ್ದ ಭೂಮಿಗೆ ತಂಪೆರೆದಿದೆ.
ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಭಾರೀ ಮಳೆ ಸುರಿಯಲಿದೆ ಎಂದು ಎಚ್ಚರಿಕೆ ನೀಡಿದೆ.
ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಇಂದು ಸಂಜೆಯ ವೇಳೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜಮೀನುಗಳಲ್ಲಿ ವಾಸ ಮಾಡುತ್ತಿರುವ ರೈತರು ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.





