Mysore
14
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಇನ್ನು ಆರು ತಿಂಗಳಲ್ಲಿ ಬಿಜೆಪಿ ಅರ್ಧದಷ್ಟು ನಾಯಕರು ಜೈಲಿನಲ್ಲಿರುತ್ತಾರೆ: ಸಚಿವ ಪ್ರಿಯಾಂಕ್‌ ಖರ್ಗೆ ಸ್ಫೋಟಕ ಹೇಳಿಕೆ

ಬೆಂಗಳೂರು: ಇನ್ನು ಆರು ತಿಂಗಳಲ್ಲಿ ಬಿಜೆಪಿಯ ಅರ್ಧದಷ್ಟು ನಾಯಕರು ಜೈಲಿನಲ್ಲಿರುತ್ತಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಈ ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಕುರಿತು ತನಿಖೆ ನಡೆಸಲಿದ್ದು, ಮುಂದಿನ ಆರು ತಿಂಗಳಲ್ಲಿ ರಾಜ್ಯದ ಅರ್ಧದಷ್ಟು ಬಿಜೆಪಿ ನಾಯಕರು ಜೈಲಿನಲ್ಲಿರುತ್ತಾರೆ ಅಥವಾ ಜಾಮೀನಿಗಾಗಿ ಕೋರ್ಟ್‌ಗೆ ಓಡುತ್ತಾರೆ ಎಂದರು.

ಬಿಜೆಪಿ ನಾಯಕರ ಮೇಲೆ 35ಕ್ಕೂ ಹೆಚ್ಚು ಪ್ರಕರಣಗಳಿವೆ. ರಾಜ್ಯ ಸರ್ಕಾರ ಅಪರಾಧ ತನಿಖಾ ಇಲಾಖೆಯ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿದೆ. ಈ ಎಲ್ಲಾ ಪ್ರಕರಣಗಳನ್ನು ರಾಜ್ಯ ಸರ್ಕಾರ ಸೂಕ್ಷ್ಮವಾಗಿ ಗಮನಿಸಿದೆ. ಎಲ್ಲಾ ಪ್ರಕರಣಗಳ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ತೀವ್ರ ಭ್ರಷ್ಟಾಚಾರ ಇತ್ತು. ಅದರ ಮೇಲೆ ಈಗ ತನಿಖೆ ಶುರು ಮಾಡಲಾಗಿದ್ದು, ಮುಂದಿನ ಆರು ತಿಂಗಳಲ್ಲಿ ಅರ್ಧದಷ್ಟು ಬಿಜೆಪಿ ನಾಯಕರು ಜಾಮೀನಿಗಾಗಿ ಓಡುತ್ತಾರೆ ಅಥವಾ ಜೈಲಿನಲ್ಲಿರುತ್ತಾರೆ ಎಂದು ಹೇಳಿದರು.

ಇನ್ನು ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಅವ್ಯವಸ್ಥೆಗೆ ರಾಜ್ಯಪಾಲರಾದ ಗೆಹ್ಲೋಟ್‌ ಕಾರಣರಾಗಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಅವರು ಬಿಜೆಪಿ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದರು.

Tags:
error: Content is protected !!