ಬೆಂಗಳೂರು: ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ವರಿಷ್ಠರ ಭೇಟಿಯ ನಂತರ ಮುಂದಿನ ಹೆಜ್ಜೆಯ ಬಗ್ಗೆ ಗೊತ್ತಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಆರೋಗ್ಯದಲ್ಲಿ ಏರುಪೇರು ಹಾಗೂ ಬಜೆಟ್ ಇದ್ದ ಕಾರಣ ದೆಹಲಿಗೆ ಹೋಗಿರಲಿಲ್ಲ. ಈಗ ದೆಹಲಿಗೆ ಹೊರಡಲು ಸಿದ್ದವಾಗಿದ್ದು, ಹೈಕಮಾಂಡ್ ಭೇಟಿಯಾಗಿ ಎಲ್ಲ ವಿಷಯಗಳ ಚರ್ಚೆಯ ನಂತರ ಮುಂದಿನ ಹೆಜ್ಜೆ ಏನು ಎಂಬುದು ತಿಳಿಯುತ್ತದೆ ಎಂದರು.
ಹನಿಟ್ರ್ಯಾಪ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ರಾಜಣ್ಣ ದೂರು ನೀಡಿದ್ದಾರೆ. ಈ ವಿಚಾರವಾಗಿ ತನಿಖೆ ಆಗುತ್ತಿದೆ. ಹನಿಟ್ರ್ಯಾಪ್ ಹಿಂದೆ ಯಾರಿದ್ದಾರೆ ಎಂಬ ವಿಷಯ ಹೊರಬರಲೇಬೇಕು ಎಂದು ತಿಳಿಸಿದರು.





