Mysore
16
clear sky

Social Media

ಶುಕ್ರವಾರ, 10 ಜನವರಿ 2025
Light
Dark

ಶರಣಾಗತರಾಗಿದ್ದ ಆರು ಮಂದಿ ನಕ್ಸಲರಿಗೆ ಜನವರಿ.30ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ ಆರು ಮಂದಿ ನಕ್ಸಲರಿಗೆ ಜನವರಿ.30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್‌ ಆದೇಶ ಹೊರಡಿಸಿದೆ.

ಕರ್ನಾಟಕದ ಇತಿಹಾಸದಲ್ಲೇ ನಿನ್ನೆ ಅತಿದೊಡ್ಡ ಮಟ್ಟದಲ್ಲಿ ನಕ್ಸಲರು ಶರಣಾಗತರಾಗಿದ್ದು, 24 ವರ್ಷಗಳ ಬಳಿಕ ಮೋಸ್ಟ್‌ ವಾಂಟೆಡ್‌ ಆರು ಮಂದಿ ನಕ್ಸಲರು ಸರ್ಕಾರದ ಮುಂದೆ ಶರಣಾಗತರಾಗಿದ್ದರು.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್‌, ಡಿಸಿಎಂ ಡಿ.ಕೆ.ಶಿವಕುಮಾರ್‌, ಡಿಜಿಪಿ ಅಲೋಕ್‌ ಮೋಹನ್‌ ಸಮ್ಮುಖದಲ್ಲಿ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಆರು ಮಂದಿ ನಕ್ಸಲರು ಶರಣಾಗತರಾಗಿದ್ದರು.

ಶರಣಾಗತರಾಗಿದ್ದ ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ತಮಿಳುನಾಡಿನ ಕೆ.ವಸಂತ ಅಲಿಯಾಸ್‌ ರಮೇಶ್‌, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಎಂಬ ನಕ್ಸಲರನ್ನು ಇಂದು ಎನ್‌ಐಎ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.

ವಾದ ಆಲಿಸಿದ ಕೋರ್ಟ್‌ ಆರು ಮಂದಿ ನಕ್ಸಲರಿಗೆ ಜನವರಿ.30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಇನ್ನು ನಿನ್ನೆ ಬೆಳಿಗ್ಗೆ 7 ಗಂಟೆಗೆ ಶೃಂಗೇರಿಯಿಂದ ಹೊರಟ ನಕ್ಸಲರ ತಂಡ ಚಿಕ್ಕಮಗಳೂರಿನಲ್ಲಿ ಮಾತುಕತೆ ಮುಗಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದರು. ಸಂಜೆ ಆರು ಗಂಟೆಯ ವೇಳೆ ಸಿಎಂ ಗೃಹ ಕಚೇರಿ ಕೃಷ್ಣಗೆ ತಲುಪಿದ ನಕ್ಸಲರ ತಂಡ ಪೊಲೀಸರಿಗೆ ಶರಣಾಗತರಾಗಿದ್ದರು.

 

Tags: