ಬೆಂಗಳೂರು: ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ ಆರು ಮಂದಿ ನಕ್ಸಲರಿಗೆ ಜನವರಿ.30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ ಹೊರಡಿಸಿದೆ.
ಕರ್ನಾಟಕದ ಇತಿಹಾಸದಲ್ಲೇ ನಿನ್ನೆ ಅತಿದೊಡ್ಡ ಮಟ್ಟದಲ್ಲಿ ನಕ್ಸಲರು ಶರಣಾಗತರಾಗಿದ್ದು, 24 ವರ್ಷಗಳ ಬಳಿಕ ಮೋಸ್ಟ್ ವಾಂಟೆಡ್ ಆರು ಮಂದಿ ನಕ್ಸಲರು ಸರ್ಕಾರದ ಮುಂದೆ ಶರಣಾಗತರಾಗಿದ್ದರು.
ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್, ಡಿಸಿಎಂ ಡಿ.ಕೆ.ಶಿವಕುಮಾರ್, ಡಿಜಿಪಿ ಅಲೋಕ್ ಮೋಹನ್ ಸಮ್ಮುಖದಲ್ಲಿ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಆರು ಮಂದಿ ನಕ್ಸಲರು ಶರಣಾಗತರಾಗಿದ್ದರು.
ಶರಣಾಗತರಾಗಿದ್ದ ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ತಮಿಳುನಾಡಿನ ಕೆ.ವಸಂತ ಅಲಿಯಾಸ್ ರಮೇಶ್, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಎಂಬ ನಕ್ಸಲರನ್ನು ಇಂದು ಎನ್‌ಐಎ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.
ವಾದ ಆಲಿಸಿದ ಕೋರ್ಟ್ ಆರು ಮಂದಿ ನಕ್ಸಲರಿಗೆ ಜನವರಿ.30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಇನ್ನು ನಿನ್ನೆ ಬೆಳಿಗ್ಗೆ 7 ಗಂಟೆಗೆ ಶೃಂಗೇರಿಯಿಂದ ಹೊರಟ ನಕ್ಸಲರ ತಂಡ ಚಿಕ್ಕಮಗಳೂರಿನಲ್ಲಿ ಮಾತುಕತೆ ಮುಗಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದರು. ಸಂಜೆ ಆರು ಗಂಟೆಯ ವೇಳೆ ಸಿಎಂ ಗೃಹ ಕಚೇರಿ ಕೃಷ್ಣಗೆ ತಲುಪಿದ ನಕ್ಸಲರ ತಂಡ ಪೊಲೀಸರಿಗೆ ಶರಣಾಗತರಾಗಿದ್ದರು.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…