Mysore
22
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ನಿಖಿಲ್‌ ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ. ನಾನು ಶುದ್ಧ ಹಸ್ತ ಎಂದು ಪದೇ ಪದೇ ಹೇಳುವ ಸಿಎಂ ಸಿದ್ದರಾಮಯ್ಯ ಈಗ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.

ನಾವು ಪಾದಯಾತ್ರೆ ಮಾಡಿದ್ದು ಸತ್ಯದ ಪರ. ಹೀಗಾಗಿಯೇ ರಾಜ್ಯಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬ ಅಕ್ರಮ ಎಸಗಿದೆ ಎಂಬುದು ಅಷ್ಟೇ ಸತ್ಯ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಸದ್ಯ ಈಗ ಸಿದ್ದರಾಮಯ್ಯ ಸಂಕಷ್ಟದಲ್ಲಿದ್ದಾರೆ. ಅವರಿಗೆ ಬೇರೆ ಆಯ್ಕೆಯೇ ಇಲ್ಲ. ಅವರು ಸತ್ಯ ಒಪ್ಪಿಕೊಂಡು ರಾಜೀನಾಮೆ ನೀಡಬೇಕು. ಗೌರವಯುತವಾಗಿ ರಾಜೀನಾಮೆ ನೀಡಿ ನಿರ್ಗಮಿಸಬೇಕು ಎಂದು ಒತ್ತಾಯಿಸಿದರು.

 

Tags:
error: Content is protected !!