ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ. ನಾನು ಶುದ್ಧ ಹಸ್ತ ಎಂದು ಪದೇ ಪದೇ ಹೇಳುವ ಸಿಎಂ ಸಿದ್ದರಾಮಯ್ಯ ಈಗ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ನಾವು ಪಾದಯಾತ್ರೆ ಮಾಡಿದ್ದು ಸತ್ಯದ ಪರ. ಹೀಗಾಗಿಯೇ ರಾಜ್ಯಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬ ಅಕ್ರಮ ಎಸಗಿದೆ ಎಂಬುದು ಅಷ್ಟೇ ಸತ್ಯ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಸದ್ಯ ಈಗ ಸಿದ್ದರಾಮಯ್ಯ ಸಂಕಷ್ಟದಲ್ಲಿದ್ದಾರೆ. ಅವರಿಗೆ ಬೇರೆ ಆಯ್ಕೆಯೇ ಇಲ್ಲ. ಅವರು ಸತ್ಯ ಒಪ್ಪಿಕೊಂಡು ರಾಜೀನಾಮೆ ನೀಡಬೇಕು. ಗೌರವಯುತವಾಗಿ ರಾಜೀನಾಮೆ ನೀಡಿ ನಿರ್ಗಮಿಸಬೇಕು ಎಂದು ಒತ್ತಾಯಿಸಿದರು.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…