Categories: ರಾಜ್ಯ

ಜೆಡಿಎಸ್‌ ಕಾರ್ಯಕರ್ತರಿಗೆ ಪತ್ರ ಬರೆದ ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಕಂಡ ಬೆನ್ನಲ್ಲೇ ಜೆಡಿಎಸ್‌ ನಾಯಕ ನಿಖಿಲ್‌ ಕುಮಾರಸ್ವಾಮಿ ತಮ್ಮ ಕಾರ್ಯಕರ್ತರಿಗೆ ಪತ್ರ ಬರೆದಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ನಿಖಿಲ್‌ ಕುಮಾರಸ್ವಾಮಿ ಅವರು, ನನ್ನ ಸೋಲು ಅನಿರೀಕ್ಷಿತ. ಸೋಲು ಯಾಕಾಯಿತೆಂದು ಈಗಾಗಲೇ ಕಾರಣ ಕೊಟ್ಟಿದ್ದೇನೆ. ನಾನು ಸೋಲಿಗೆ ಹೆದರುವ ವ್ಯಕ್ತಿಯಲ್ಲ. ಇಂತಹ ಅನೇಕ ಸೋಲುಗಳನ್ನು ಪಕ್ಷ ಜೀರ್ಣಿಸಿಕೊಂಡಿದೆ. ಸತತ ಸೋಲುಗಳ ಮೂಲಕ ಪಕ್ಷ ಫೀನಿಕ್ಸ್‌ನಂತೆ ಎದ್ದು ಬಂದಿದೆ.

ಈ ಸೋಲು ನನಗೆ ಭಾರೀ ನೋವುಂಟು ಮಾಡಿದೆ. ನಿಜ. ಇಲ್ಲ ಎಂದು ಹೇಳಿ ಆತ್ಮವಂಚನೆ ಮಾಡಿಕೊಳ್ಳುವುದಿಲ್ಲ. ಹಾಗಂತ ನಾನು ಸೋಲುತ್ತೇನೆ ಎಂದು ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಗೆಲ್ಲಲು ಪ್ರಾಮಾಣಿಕವಾಗಿ ಹೋರಾಡಿದ್ದೇವೆ. ಮತ್ತೆ ಫುಟಿದೆದ್ದು ಬರುವ ಛಲ ನನಗಿದೆ. ಹಿಂದಿನ ಎರಡು ಸೋಲುಗಳು ನನಗೆ ಅಸಹಾಯಕತೆಯನ್ನು ಮೆಟ್ಟಿನಿಂತು ಅಪಮಾನ ಧಿಕ್ಕರಿಸಿ ಸೆಣಸುವ ಆತ್ಮಬಲ ಕೊಟ್ಟಿವೆ.

ಚನ್ನಪಟ್ಟಣದಲ್ಲೂ ಅದೇ ಛಲ, ಆತ್ಮಬಲದಿಂದ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರ ಜೊತೆಗೂಡಿ ದಿಟ್ಟ ಹೋರಾಟ ನಡೆಸಿದ್ದೇನೆ.

ನನ್ನ ಸೋಲು ನನ್ನ ಕಾರ್ಯಕರ್ತರಿಗೆ ನೋವುಂಟು ಮಾಡಿದೆ. ಇಡೀ ರಾಜ್ಯದ ಕಾರ್ಯಕರ್ತರೆಲ್ಲರೂ ವೀರಯೋಧರಂತೆ ಚನ್ನಪಟ್ಟಣದಲ್ಲಿ ಹಗಲಿರುಳು ದುಡಿದರು. ಅಂತಿಮವಾಗಿ ನನಗೆ ಸೋಲಾಯಿತು. ನಾನು ಅದನ್ನು ಶಿರಬಾಗಿ ಸ್ವೀಕರಿಸಿದ್ದೇನೆ ಎಂದು ಬರೆದುಕೊಳ್ಳುವ ಮೂಲಕ ಕಾರ್ಯಕರ್ತರಿಗೆ ಧೈರ್ಯ ಹೇಳಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

5 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

6 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

7 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

8 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

11 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

12 hours ago