Mysore
62
clear sky

Social Media

ಬುಧವಾರ, 11 ಫೆಬ್ರವರಿ 2026
Light
Dark

ನ್ಯಾಯಾಲಯದ ತೀರ್ಪಿಗೆ ತಲೆ ಬಾಗಲೇಬೇಕು: ನಿಖಿಲ್‌ ಕುಮಾರಸ್ವಾಮಿ 

ಚಿತ್ರದುರ್ಗ: ಕೋರ್ಟ್‌ ತೀರ್ಪಿಗೆ ಯಾರೇ ಆದರೂ ತಲೆ ಬಾಗಲೇಬೇಕಾಗುತ್ತದೆ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಸಂಬಂಧ ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ ವಿರುದ್ಧ ಸೆಷನ್‌ ಕೋರ್ಟ್‌ನಲ್ಲಿ ಆದೇಶ ಪ್ರಕಟಗೊಂಡಿದೆ. ಕೋರ್ಟ್‌ ತೀರ್ಪಿನ ಬಗ್ಗೆ ಹೆಚ್ಚಿನ ವಿಶ್ಲೇಷಣೆಯ ಅಗತ್ಯವಿಲ್ಲ ಎಂದರು.

ಪ್ರಜ್ವಲ್‌ ಮೇಲೆ ಆರೋಪ ಬಂದ ತಕ್ಷಣ ಪಕ್ಷದಿಂದ ಅಮಾನತು ಮಾಡಲಾಗಿತ್ತು. ನಮ್ಮ ಪಕ್ಷದ ವರಿಷ್ಠರು ಪಕ್ಷದಿಂದ ಅಮಾನತಿನಲ್ಲಿಟ್ಟಿದ್ದರು. ಆಗ ಅಪರಾಧಿ ಎಂಬ ತೀರ್ಪು ಬಂದಿರಲಿಲ್ಲ. ವರಿಷ್ಠರ ತೀರ್ಮಾನದ ಸ್ಪಷ್ಟತೆ ಅರ್ಥ ಮಾಡಿಕೊಳ್ಳಬೇಕಾಗುತ್ತದೆ. ಇದಕ್ಕಿಂತ ಹೆಚ್ಚಾಗಿ ಈ ವಿಷಯದ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿದ್ದಾರೆ.

Tags:
error: Content is protected !!