ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿರುವ ನಿಖಿಲ್ ಕುಮಾರಸ್ವಾಮಿ ಅವರೀಗ ಅಲ್ಪಸಂಖ್ಯಾತರತ್ತ ಮತ್ತೆ ಬೊಟ್ಟು ಮಾಡಿ ತೋರಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ಈ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ದಿಯ ಕಡೆಗೆ ಗಮನ ಹರಿಸಿದ್ದೆವು. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಹಾದಿಯಲ್ಲಿದ್ದೆವು. ಆದರೆ ಅವರು ನಮ್ಮನ್ನು ತಿರಸ್ಕರಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಪಕ್ಷದ ಮೇಲೆ ಗೌರವ ಇರುವ ಜನರು ನಮ್ಮನ್ನು ಕೈಬಿಟ್ಟಿಲ್ಲ. ಯಾವುದೇ ಕಾರ್ಯಕರ್ತ ನಿಂತರೂ ಸಾಂಪ್ರದಾಯಿಕವಾಗಿ ಹತ್ತಿರ 60 ಸಾವಿರ ಮತಗಳು ಬರುತ್ತಿದ್ದವು. ಈಗ ಅದು 87 ಸಾವಿರಕ್ಕೆ ಮುಟ್ಟಿದೆ. ದೇವೇಗೌಡರು ಈ ಹಿಂದೆ ಅಲ್ಪಸಂಖ್ಯಾತ ಸಮುದಾಯದ ಪರ ಮೀಸಲಾತಿ, ಇನ್ನಿತರ ವಿಚಾರದ ಬಗ್ಗೆಯೂ ತೀರ್ಮಾನ ಮಾಡಿದ್ದರು. ಆದರೆ ಅವರಿಗೆ ನಮ್ಮ ಅವಶ್ಯಕತೆಯಿಲ್ಲ ಎಂಬುದು ಈ ಚುನಾವಣೆಯಿಂದ ಸ್ಪಷ್ಟವಾಗಿದೆ. ಮುಂದಿನ ದಿನಗಳಲ್ಲಿ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ ಎಂದರು.
ಇನ್ನು ದೇವೇಗೌಡರು ರಾಜಕೀಯ ನಿವೃತ್ತಿ ಘೋಷಿಸಲಿ ಎಂಬ ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದೇವೇಗೌಡರು ಅಧಿಕಾರಕ್ಕಾಗಿ ರಾಜಕಾರಣ ಮಾಡುತ್ತಿಲ್ಲ. ದೇಶ ಹಾಗೂ ರಾಜ್ಯ ಕಟ್ಟಲು ಅವರ ಮಾರ್ಗದರ್ಶನ ಬೇಕು ಎಂದು ಅನೇಕ ವೇಳೆ ಪ್ರಧಾನಿಯವರೇ ಹೇಳಿದ್ದಾರೆ. ಅಧಿಕಾರದ ದಾಹಕ್ಕೆ ಅಂಟಿಕೊಂಡು ದೇವೇಗೌಡರು ರಾಜಕಾರಣ ಮಾಡುತ್ತಿಲ್ಲ ಎಂದು ಸಿಪಿವೈಗೆ ತಿರುಗೇಟು ನೀಡಿದರು.
ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…