ಭದ್ರಾವತಿ: ರಾಮನಗರದಲ್ಲಿ ಧಮ್ಮು, ತಾಕತ್ತು ಬಗ್ಗೆ ಮಾತನಾಡುತ್ತೀರಿ, ನಿಜವಾಗಿಯೂ ಧಮ್ಮು ಮತ್ತು ತಾಕತ್ತು ಇದ್ದರೆ ಶಾಸಕ ಬಿ.ಕೆ.ಸಂಗಮೇಶ್ ಅವರ ಮಗನ ಮೇಲೆ ಎಫ್‌ಐಆರ್ ದಾಖಲಿಸಬೇಕು. ಅಲ್ಲಿಯರೆಗೂ ಈ ಪ್ರತಿಭಟನೆ ಮುಂದುವರೆಯಲಿದ್ದು ಮುಕ್ತಾಯವಲ್ಲ, ಹೊಸ ಅಧ್ಯಾಯ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಜ್ಯೋತಿ ಅವರಿಗೆ ಬೆದರಿಕೆ ಹಾಕಿದ ಪ್ರಕರಣದ ವಿರುದ್ಧ ಇಂದು(ಫೆಬ್ರವರಿ.15) ಭದ್ರಾವತಿ ಜೆಡಿಎಸ್ ತಾಲ್ಲೂಕು ಘಟಕ ಹಾಗೂ ಬಿಜೆಪಿ ಘಟಕ ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
ರಾಮನಗರದಲ್ಲಿ ಧಮ್ಮು ಮತ್ತು ತಾಕತ್ತು ಬಗ್ಗೆ ಮಾತನಾಡುತ್ತೀರಿ ಅಲ್ಲವೇ ಈ ಪ್ರಕರಣದ ಬಗ್ಗೆಯೂ ಎಫ್‌ಐಆರ್ ಹಾಕಿ, ಶಾಸಕರ ಮಗನ ಧ್ವನಿಯನ್ನು ಎಫ್‌ಎಸ್‌ಎಲ್ ಪರೀಕ್ಷೆ ಮಾಡಿಸಿ ತನಿಖೆ ನಡೆಸಬೇಕು. ಈ ಪ್ರತಿಭಟನೆ ಇಲ್ಲಿಗೆ ಮುಕ್ತಾಯ ಆಗಲ್ಲ, ಇಲ್ಲಿಂದ ಹೊಸ ಅಧ್ಯಾಯ ಶುರುವಾಗಲಿದೆ. ಭದ್ರಾವತಿಯ ನಾಗರೀಕರು ಜಾಗೃತರಾಗಿರಬೇಕು ನಿಮ್ಮ ಜೊತೆ ನಾವಿದ್ದೇವೆ ಎಂದರು.
ಇದೇ ಸಂದರ್ಭದಲ್ಲಿ ಮಹಿಳಾ ಅಧಿಕಾರಿ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ಶಾಸಕರ ಪುತ್ರನನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿ ಭದ್ರಾವತಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬಳಿಕ ಭದ್ರಾವತಿಯಲ್ಲಿ ಕಾಂಗ್ರೆಸ್ ಶಾಸಕರ ದೌರ್ಜನ್ಯ ಬಹಳ ದಿನ ನಡೆಯಲ್ಲ. ಅಭಿವೃದ್ಧಿಗೆ ಮೀಸಲಿಡಬೇಕಾದ ಸಮಯವನ್ನು ಇಸ್ಪೀಟ್ ದಂಧೆ ಮತ್ತು ಮಾದಕ ವಸ್ತುಗಳ ಪೂರೈಕೆಗೆ ಶಾಸಕರು ಸಮಯ ಮೀಸಲಿಟ್ಟಿದ್ದಾರೆ ಎಂದು ಶಾಸಕ ಸಂಗಮೇಶ್ ವಿರುದ್ಧ ಕಿಡಿಕಾರಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಎರಡೂ ಸಲ ಮುಖ್ಯಮಂತ್ರಿಯಾಗಿದ್ದರೂ ಕೂಡ ಇದುವರೆಗೂ ಅಧಿಕಾರಿಗಳಿಗೆ ಒಂದು ಕೆಲಸವನ್ನು ಮಾಡಿ ಎಂದು ನಾನು ಫೋನ್ ಕರೆ ಮಾಡಿಲ್ಲ. ಪೊಲೀಸ್ ಅಧಿಕಾರಿಗಳು ಪಾರದರ್ಶಕವಾಗಿ ನಡೆದುಕೊಳ್ಳಬೇಕು. ನಾನು ಪೊಲೀಸ್ ಅವರಿಗೆ ಕೈ ಮುಗಿದು ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.
ಇಡೀ ರಾಜ್ಯಾದ್ಯಂತ ಶಾಸಕರ ದುರಂಹಕಾರ ಗೊತ್ತಾಗಿದೆ. ರಾಜ್ಯದ ಜನತೆಗೆ ಮಾಧ್ಯಮದವರು ವಾಸ್ತವ ತಿಳಿಸಿದ್ದಾರೆ. ಅಪ್ಪಾಜಿ ಗೌಡರನ್ನ ನಾವು ನೆನಪಿಸಿಕೊಳ್ಳಬೇಕು ಆಸ್ತಿ ಮಾಡದೆ ಜನರ ಪ್ರಾಮಾಣಿಕ ಕೆಲಸ ಮಾಡಿದ್ದಾರೆ. ಹೀಗಾಗಿ ಪೊಲೀಸ್ ಅಧಿಕಾರಿಗಳು ಪಾರದರ್ಶಕವಾಗಿ ನಡೆದುಕೊಂಡು ತನಿಖೆ ನಡೆಸಿ ಎಂದು ಒತ್ತಾಯಿಸಿದರು.
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…
ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…
ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…