ಬೆಂಗಳೂರು: ಗ್ಯಾರಂಟಿ ಯೋಜನೆ ಹಣ ವಿಳಂಬ ಆಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ವಿಳಂಬ ಸಾಕು, ಕಾರಣ ಬೇಡ, ಕಟಾಕಟ್ ಹಣ ವರ್ಗಾಯಿಸಿ ಎಂದು ಆಗ್ರಹಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಗೃಹಲಕ್ಷ್ಮೀ ಮತ್ತು ಯುವನಿಧಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿದೆ. ಪ್ರತಿ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ಹೇಳಿತ್ತು. ಸಿಎಂ ಹಾಗೂ ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ 4 ಲಕ್ಷ ಕೋಟಿ ರೂ ಗಾತ್ರದ ಬಜೆಟ್ ರೂಪಿಸುವಲ್ಲಿ ನಿರತರಾಗಿದ್ದಾರೆ. ಆದರೆ ವಿಪರ್ಯಾಸವೆಂದರೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಣಕ್ಕಾಗಿ 3-4 ತಿಂಗಳು ಕಾಯಬೇಕಾಗಿದೆ.
ಯಾವುದಾದರೂ ಚುನಾವಣೆಗಳು ಸಮೀಪಿಸಿದಾಗ ಮಾತ್ರ ಮ್ಯಾಜಿಕ್ ಆಗಿ ಹಣ ಜಮವಾಗುತ್ತದೆ. ಪ್ರತಿ ಬಾರಿಯೂ ತಾಂತ್ರಿಕ ಸಮಸ್ಯೆಯ ನೆಪ ಒಡ್ಡುವುದು ಹಾಸ್ಯಾಸ್ಪದವಾಗಿದೆ ಎಂದು ಕಿಡಿಕಾರಿದರು.
ಮುಂಬರುವ ಬಜೆಟ್ ಅಧಿವೇಶನದಲ್ಲಿ ಗ್ಯಾರಂಟಿ ಕ್ಯಾಲೆಂಡರ್ ಬಿಡುಗಡೆ ಮಾಡಿ, ಹಣ ಜಮಾ ಮಾಡುವ ದಿನಾಂಕವನ್ನು ನಿಗದಿ ಮಾಡಿ, ಸಮಯಕ್ಕೆ ಸರಿಯಾಗಿ ಡಿಬಿಟಿ ವರ್ಗಾವಣೆ ಮಾಡಿ ಎಂದು ಆಗ್ರಹಿಸಿದರು.
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…
ಬೆಳಗಾವಿ(ಸುವರ್ಣ ವಿಧಾನ ಸೌಧ) : ಗ್ಯಾರಂಟಿ ಯೋಜನೆಗಳ ಮೂಲಕ ನಾಗರಿಕರಿಗೆ ನೇರವಾಗಿ ಹಣ ವರ್ಗಾವಣೆಯಿಂದ ಅವರ ಆರ್ಥಿಕ ಬದುಕು ಬಹಳಷ್ಟು…
ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…
ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…