ರಾಜ್ಯ

ಗ್ಯಾರಂಟಿ ಯೋಜನೆ ವಿಳಂಬ: ನಿಖಿಲ್‌ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಗ್ಯಾರಂಟಿ ಯೋಜನೆ ಹಣ ವಿಳಂಬ ಆಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ವಿರುದ್ಧ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ವಿಳಂಬ ಸಾಕು, ಕಾರಣ ಬೇಡ, ಕಟಾಕಟ್‌ ಹಣ ವರ್ಗಾಯಿಸಿ ಎಂದು ಆಗ್ರಹಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷವು ಗೃಹಲಕ್ಷ್ಮೀ ಮತ್ತು ಯುವನಿಧಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿದೆ. ಪ್ರತಿ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ಹೇಳಿತ್ತು. ಸಿಎಂ ಹಾಗೂ ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ 4 ಲಕ್ಷ ಕೋಟಿ ರೂ ಗಾತ್ರದ ಬಜೆಟ್‌ ರೂಪಿಸುವಲ್ಲಿ ನಿರತರಾಗಿದ್ದಾರೆ. ಆದರೆ ವಿಪರ್ಯಾಸವೆಂದರೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಣಕ್ಕಾಗಿ 3-4 ತಿಂಗಳು ಕಾಯಬೇಕಾಗಿದೆ.

ಯಾವುದಾದರೂ ಚುನಾವಣೆಗಳು ಸಮೀಪಿಸಿದಾಗ ಮಾತ್ರ ಮ್ಯಾಜಿಕ್‌ ಆಗಿ ಹಣ ಜಮವಾಗುತ್ತದೆ. ಪ್ರತಿ ಬಾರಿಯೂ ತಾಂತ್ರಿಕ ಸಮಸ್ಯೆಯ ನೆಪ ಒಡ್ಡುವುದು ಹಾಸ್ಯಾಸ್ಪದವಾಗಿದೆ ಎಂದು ಕಿಡಿಕಾರಿದರು.

ಮುಂಬರುವ ಬಜೆಟ್‌ ಅಧಿವೇಶನದಲ್ಲಿ ಗ್ಯಾರಂಟಿ ಕ್ಯಾಲೆಂಡರ್‌ ಬಿಡುಗಡೆ ಮಾಡಿ, ಹಣ ಜಮಾ ಮಾಡುವ ದಿನಾಂಕವನ್ನು ನಿಗದಿ ಮಾಡಿ, ಸಮಯಕ್ಕೆ ಸರಿಯಾಗಿ ಡಿಬಿಟಿ ವರ್ಗಾವಣೆ ಮಾಡಿ ಎಂದು ಆಗ್ರಹಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

5 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

6 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

6 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

7 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

13 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

13 hours ago