Mysore
27
few clouds

Social Media

ಶನಿವಾರ, 15 ಮಾರ್ಚ್ 2025
Light
Dark

ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ಡಕೌಟ್‌ ಬಜೆಟ್: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನಿನ್ನೆ ಮಂಡಿಸಿದ ಬಜೆಟ್ ಡಕೌಟ್‌ ಬಜೆಟ್‌ ಎಂದು ನಿಖಿಲ್‌ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಒಂದು ಅಲ್ಪಸಂಖ್ಯಾತ ಸಮುದಾಯಕ್ಕೆ ಬಿರಿಯಾನಿ ನೀಡಿದ್ದಾರೆ. ಉಳಿದ ಅಲ್ಪಸಂಖ್ಯಾತ ಸಮುದಾಯಗಳಿಗೆ ಉಪ್ಪಿನಕಾಯಿ ಕೊಟ್ಟು ಚಪ್ಪರಿಸಿಕೊಂಡು ತಿನ್ನಿ ಎಂದು ಹೇಳಿದ್ದಾರೆ. ಇಂತಹ ಬಜೆಟ್‌ ಕೊಟ್ಟವರಿಗೆ ನಾಚಿಕೆ ಆಗಬೇಕು ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಇದನ್ನು ಸಿಎಂ ಸಿದ್ದರಾಮಯ್ಯ 16ನೇ ಬಜೆಟ್‌ ಎಂದು ಎಲ್ಲರೂ ಹೇಳುತ್ತಿದ್ದಾರೆ. ಇದನ್ನು ದಾಖಲೆ ಎಂದು ಹೊಗಳುತ್ತಿದ್ದಾರೆ. ಆದರೆ, ಮುಸ್ಲಿಮರಿಗೆ ಹದಿನಾರು ಕಾರ್ಯಕ್ರಮಗಳನ್ನು ಕೊಟ್ಟು ತಮ್ಮ ನಿರ್ದಿಷ್ಟ ಕಾರ್ಯಸೂಚಿ ಏನು ಎಂಬುದನ್ನು ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಸಮಾಜವನ್ನು ಹೇಗೆ ಒಡೆಯಬೇಕು ಎಂಬುದನ್ನು ಅವರು ಕಣ್ಣಿಗೆ ಕಟ್ಟುವಂತೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Tags: