ರಾಜ್ಯ

ನಿಖಿಲ್‌ ಕುಮಾರಸ್ವಾಮಿ ನಾಳೆಯಿಂದ ರಾಜ್ಯ ಪ್ರವಾಸ : ಪಕ್ಷ ಸಂಘಟನೆಗೆ ಒತ್ತು

ಬೆಂಗಳೂರು : ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತವಾಗಿ ಪ್ರವಾಸ ಆರಂಭ ಮಾಡ್ತೇನೆ. ಎಲ್ಲಾ ಹಿರಿಯ ಮುಖಂಡರು ಸಹಕಾರ ಕೊಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು.

ಪಕ್ಷವನ್ನು ಜನರ ಬಳಿಗೆ ಕರೆದೊಯ್ಯುವ ಉದ್ದೇಶದಿಂದ ಹಿರಿಯರು ಸೇರಿ ಪಕ್ಷದ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನರೊಂದಿಗೆ ಜನತಾದಳ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಇದರ ಭಗವಾಗಿಯೇ ರಾಜ್ಯ ಪಕ್ಷ ಸಂಘಟನಾ ರಾಜ್ಯ ಪ್ರವಾಸ ಮತ್ತು ಮಿಸ್ ಕಾಲ್ ಅಭಿಯಾನ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಇಂದಿನಿಂದ ಅಧಿಕೃತವಾಗಿ ಮಿಸ್ಡ್ ಕಾಲ್ ಅಭಿಯಾನದ ಮೂಲಕ ಸದಸ್ಯತ್ವ ನೋಂದಣಿ ಆರಂಭ ಮಾಡಿದ್ದೇವೆ. ರಾಜ್ಯ ಪ್ರವಾಸದ ವೇಳೆ ಪ್ರತಿ ಕಾರ್ಯಕರ್ತರನ್ನು ಭೇಟಿ ಮಾಡಿ. ಪಕ್ಷಕ್ಕಾಗಿ ದುಡಿಯುವ ತಳಮಟ್ಟದ ಕಾರ್ಯಕರ್ತರನ್ನು ಗುರುತಿಸುವ ಕೆಲಸವನ್ನು ಮಾಡುತ್ತೇನೆ ಎಂದು ತಿಳಿಸಿದರು.

ಕನಿಷ್ಠ ಐವತ್ತು ಲಕ್ಷ ಜನ ಸದಸ್ಯರಾಗಬೇಕು ಎಂಬ ಗುರಿ ಇಟ್ಟುಕೊಂಡು ಹೋಗೋಣ. ಮತ್ತೆ ಈ ಪಕ್ಷವನ್ನು ತಳ ಮಟ್ಟದಿಂದ ಪುಟಿದೇಳುವಂತೆ ಮಾಡಬೇಕು ಎಂಬ ನಿಟ್ಟಿನಲ್ಲಿ ಆ.16 ರವರೆಗೆ ರಾಜ್ಯ ಪ್ರವಾಸ ಹಮ್ಮಿಕೊಳ್ಳಲಾಗಿದೆ ನಿಮ್ಮ ಸಹಕಾರ ಇರಲಿ ಎಂದು ಮನವಿ ಮಾಡಿದರು.

ಚಿತ್ರರಂಗದಲ್ಲಿ ಅಣ್ಣಾವ್ರು, ರಾಜಕಾರಣದಲ್ಲಿ ಕುಮಾರಣ್ಣ
ಚಿತ್ರರಂಗದಲ್ಲಿ ಡಾ ರಾಜ್ ಕುಮಾರಣ್ಣ ಅವರಿಗೆ ಅಣ್ಣ ಅಂತ ಸ್ಥಾನ ಕೊಟ್ಟಿದ್ದರು. ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗೆ ಜನರು ಸ್ಥಾನ‌ ನೀಡಿದ್ದಾರೆ. ಅಪ್ಪಂದಿರ ದಿನಚರಣೆ ಆಚರಿಸೋಕ್ಕೆ ನನಗೆ ಒಳ್ಳೆ ಅವಕಾಶ ತಂದೆ ಅಂದ್ರೆ ನಮ್ಮ‌ ಜೀವನದ ಬೆಳಕು. ನಾನು ನಮ್ಮ‌ ತಂದೆಯಿಂದ ಹಲವು ವಿಚಾರಗಳನ್ನು ಹಾಗೆಯೇ ದೇವೇಗೌಡರ ರಾಜಕೀಯ ಕಾರ್ಯ ಕೆಲಸ ಕಲಿತಿದ್ದೇನೆ ಎಂದು ತಿಳಿಸಿದರು.

ಒಬ್ಬ ರೈತನ ಮಗ ದೇಶದ ಉನ್ನತ ಹುದ್ದೆ ಅಲಂಕರಿಸಿದರು ದೇವೇಗೌಡರನ್ನ ಈಶ್ವರನ ಪುತ್ರ ಎಂದೇ ಹೇಳಬಹುದು. ರಾಜ್ಯದ ಬಗ್ಗೆ ಅವರಿಗೆ ಇದ್ದ ಬದ್ದತೆ ನೋಡಿದ್ರೆ ಹಲವು ಜನರಿಗೆ ಮಾರ್ಗದರ್ಶನ ಆಗುವಂತದ್ದು ಎಂದರು. ನನ್ನ ಒಳಗೆ ಆತಂಕವಿದೆ ಎಲ್ಲರೂ ಈ ಕಾರ್ಯಕ್ರಮಕ್ಕೆ ಬಂದಿದ್ದಾರೆ. ನಾನು ಪಕ್ಷದ ಸಂಘಟನೆಗೆ ಮೊದಲು ಹಾಜರಾತಿ ಆಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಮಾವೇಶಕ್ಕೂ ಮೊದಲು ಆದಿಚುಂಚನಗಿರಿ ಬುದ್ದಿಗಳ ಜೊತೆ ಕೂತಿದ್ದೆ. ಅವರು ಅನೇಕ ಪ್ರಸ್ತಾವಿಕ ನುಡಿ ಹೇಳುತ್ತಿದ್ರು. ಹೀಗಾಗಿ ಮಧ್ಯೆ ಎದ್ದು ಬರಲು ಆಗಲಿಲ್ಲ. ಎಲ್ಲರಿಗೂ ಕ್ಷಮೆ ಕೇಳುತ್ತೇನೆ ಮುಂದೆ ಈ ರೀತಿ ಆಗಲಿಲ್ಲ. ಪಕ್ಷ ಸಂಘಟನೆಗೆ ಒತ್ತು ನೀಡಲಾಗಿದೆ. ಪಕ್ಷಕ್ಕೆ ಹೊಸ ಯುಗ ಆರಂಭವಾಗಬೇಕು ಎಂದರು.

58 ದಿನಗಳ ಕಾಲ ನಿಮ್ಮ ಜೊತೆ ನಿರಂತರವಾಗಿ ಹೆಜ್ಜೆ ಹಾಕ್ತೇನೆ
ನಾಳೆಯಿಂದ ಬಹುತೇಕ ಜಿಲ್ಲೆ, ತಾಲೂಕುಗಳಿಗೆ ಭೇಟಿ ನೀಡುತ್ತೇನೆ. ಇವತ್ತು ಬಹಳ ಉತ್ಸಾಹದಿಂದ ಪಕ್ಷ ಕಟ್ಟೋಕ್ಕೆ‌ ಎಲ್ಲರು ಬಂದಿದ್ದಾರೆ. 58 ದಿನಗಳ ಕಾಲ ನಿಮ್ಮ ಜೊತೆ ನಿರಂತರವಾಗಿ ಹೆಜ್ಜೆ ಹಾಕ್ತೇನೆ. ನಾನು ನಿಮ್ಮ ಜೊತೆ ಇರುತ್ತೇನೆ. ಒಂದು ಕಡೆ ಪಕ್ಷ ಸಂಘಟನೆ ಆದರೆ ಮತ್ತೊಂದು ಕಡೆ ಸರ್ಕಾರದ ವೈಫಲ್ಯ ತೆರದಿಡಲು ಬರುತ್ತಿದ್ದೇನೆ ಎಂದರು.

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಕಡೆಯೂ ಪ್ರವಾಸ ಮಾಡ್ತೇವೆ. ಕಾರ್ಯಕರ್ತರು ಒಂದು ಛಲ ಇಟ್ಟುಕೊಳ್ಳಬೇಕು.ನಮ್ಮದು ಸಣ್ಣ ಪ್ರಮಾಣದ ಪಕ್ಷ ಅಲ್ಲ. ಹಳ್ಳಿ ಹಳ್ಳಿಗಳಿಗೆ ಹೋಗಿ ಒಂದು ರಿಜಿಸ್ಟರ್ ಮಾಡಿ ಯಾವುದೇ ಹಣ ಕಾಸು ಖರ್ಚಾಗಲ್ಲ ಎಲ್ಲರ ಬಳಿ ಸ್ಮಾರ್ಟ್ ಪೋನ್ ಇದೆ. ಡಿಜಿಟಲ್ ನಲ್ಲಿ ರಿಜಿಸ್ಟರ್ ಮಾಡಿಸಿ ಪಕ್ಷದ ಸಂಘಟನೆಯಲ್ಲಿ ಕೈ ಜೋಡಿಸಿ ಎಂದು ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

60 mins ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

1 hour ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

2 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

6 hours ago