Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ನಿಖಿಲ್‌ ಕುಮಾರಸ್ವಾಮಿಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಹುದ್ದೆ ಫಿಕ್ಸ್‌?

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಹುದ್ದೆ ಹಸ್ತಾಂತರವಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

ಇತ್ತೀಚೆಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ನಿಖಿಲ್‌ ಕುಮಾರಸ್ವಾಮಿ ಅವರು, ಮುಂದಿನ ವರ್ಷ ನಡೆಯಲಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಈಗ ಕುಮಾರಸ್ವಾಮಿ ಕೇಂದ್ರ ಸಚಿವರಾಗಿರುವ ಕಾರಣ ನಿಖಿಲ್‌ಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನ ಹಸ್ತಾಂತರವಾಗುವ ಸಾಧ್ಯತೆಯಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಸತತ ಸೋಲಿನಿಂದ ಕಂಗೆಡದ ನಿಖಿಲ್‌ ಕುಮಾರಸ್ವಾಮಿ ಅವರು, ಇದೀಗ ಜೆಡಿಎಸ್‌ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ನಿಖಿಲ್‌ ಇತ್ತೀಚೆಗೆ ನವದೆಹಲಿಯಲ್ಲಿ ಬಿ.ಎಲ್.ಸಂತೋಷ್‌ ಹಾಗೂ ರಾಧಾ ಮೋಹನ್‌ ದಾಸ್‌ ಅಗರವಾಲ್‌ ಸೇರಿದಂತೆ ಹಲವು ಕೇಂದ್ರ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದಾರೆ.

ನಾಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಸಹ ಭೇಟಿಯಾಗಲಿದ್ದು, ಪಕ್ಷ ಸಂಘಟನೆಗೆ ಬೇಕಾದ ಮಾಹಿತಿ ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ.

ಈ ಮೂಲಕ ನಿಖಿಲ್‌ ಕುಮಾರಸ್ವಾಮಿ ಅವರು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಿದ್ದು, ಮುಂದಿನ ದಿನಗಳಲ್ಲಿ ಜೆಡಿಎಸ್‌ ಪಕ್ಷ ಮತ್ತಷ್ಟು ಕ್ಷೇತ್ರಗಳನ್ನು ವಶಪಡಿಸಿಕೊಳ್ಳುವಂತೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.

Tags: