ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆ ಹಸ್ತಾಂತರವಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.
ಇತ್ತೀಚೆಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ನಿಖಿಲ್ ಕುಮಾರಸ್ವಾಮಿ ಅವರು, ಮುಂದಿನ ವರ್ಷ ನಡೆಯಲಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಈಗ ಕುಮಾರಸ್ವಾಮಿ ಕೇಂದ್ರ ಸಚಿವರಾಗಿರುವ ಕಾರಣ ನಿಖಿಲ್‌ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಹಸ್ತಾಂತರವಾಗುವ ಸಾಧ್ಯತೆಯಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಸತತ ಸೋಲಿನಿಂದ ಕಂಗೆಡದ ನಿಖಿಲ್ ಕುಮಾರಸ್ವಾಮಿ ಅವರು, ಇದೀಗ ಜೆಡಿಎಸ್ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ನಿಖಿಲ್ ಇತ್ತೀಚೆಗೆ ನವದೆಹಲಿಯಲ್ಲಿ ಬಿ.ಎಲ್.ಸಂತೋಷ್ ಹಾಗೂ ರಾಧಾ ಮೋಹನ್ ದಾಸ್ ಅಗರವಾಲ್ ಸೇರಿದಂತೆ ಹಲವು ಕೇಂದ್ರ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದಾರೆ.
ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಹ ಭೇಟಿಯಾಗಲಿದ್ದು, ಪಕ್ಷ ಸಂಘಟನೆಗೆ ಬೇಕಾದ ಮಾಹಿತಿ ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ.
ಈ ಮೂಲಕ ನಿಖಿಲ್ ಕುಮಾರಸ್ವಾಮಿ ಅವರು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಿದ್ದು, ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷ ಮತ್ತಷ್ಟು ಕ್ಷೇತ್ರಗಳನ್ನು ವಶಪಡಿಸಿಕೊಳ್ಳುವಂತೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…