ಬೆಂಗಳೂರು: ರಾಜ್ಯ ಸರ್ಕಾರ ಹನಿಟ್ರ್ಯಾಪ್ ಕೇಸ್ ತನಿಖೆಯನ್ನು ನಿಧಾನಗತಿಯಲ್ಲಿ ನಡೆಸುತ್ತಿದ್ದು, ಪಾರದರ್ಶಕವಾಗಿ ತನಿಖೆ ನಡೆಸಿ ರಾಜ್ಯ ಜನತೆಯ ಮುಂದೆ ವರದಿಯನ್ನಿಡಬೇಕು ಎಂದು ಸರ್ಕಾರಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ನಗರದ ಜೆಡಿಎಸ್ ಕಚೇರಿಯಲ್ಲಿ ಇಂದು(ಏಪ್ರಿಲ್.1) ಹನಿಟ್ರ್ಯಾಪ್ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಭಾವಿ ಸಚಿವರಿಗೆ ಹನಿಟ್ರ‍್ಯಾಪ್ ಆಗಿದೆ. ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಪಾರದರ್ಶಕವಾಗಿ ತನಿಖೆ ನಡೆಸಿ, ಸತ್ಯಾಸತ್ಯಾತೆಯ ಬಗ್ಗೆ ಜನತೆಯ ಮುಂದೆ ಅನಾವರಣಗೊಳಿಸಬೇಕು. ಆದರೆ ಸಚಿವರ ಸರ್ಕಾರವೇ ಅಧಿಕಾರದಲ್ಲಿದ್ದರೂ ತನಿಖೆಯನ್ನು ನಿಧಾನಗತಿಯಲ್ಲಿ ನಡೆಸುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ವಿರೋಧ ಪಕ್ಷದವರನ್ನು ಮುಗಿಸಲು ಯಾವ ಮಟ್ಟಕ್ಕೆ ಬೇಕಾದರೂ ಹೋಗಿ ಕೆಲಸ ಮಾಡುತ್ತದೆ. ಆದರೆ ಹನಿಟ್ರ್ಯಾಪ್ ಕೇಸ್‌ನಲ್ಲಿ ಮಾತ್ರ ಯಾಕೆ ತನಿಖೆಯನ್ನು ನಿಧಾನ ಗತಿಯಲ್ಲಿ ನಡೆಸುತ್ತಿದೆ? ಇದೇ ಸರ್ಕಾರ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರ ಕೇಸ್‌ನಲ್ಲಿ ಅಷ್ಟೊಂದು ಆಸಕ್ತಿ ವಹಿಸಿ ಏನೇನೋ ಮಾಡಿದರು. ಅಷ್ಟೊಂದು ಹೈಡ್ರಾಮಾ ಮಾಡೋಕೆ ಅವರೇನೂ ಭಯೋತ್ಪಾದಕರಾ? ಒಬ್ಬ ಎಂಎಲ್‌ಸಿಯನ್ನು ಹಾಗೇ ನಡೆಸಿಕೊಂಡಿದ್ದು ಸರಿಯಲ್ಲ. ಸರ್ಕಾರವೂ ವಿಪಕ್ಷಗಳನ್ನು ಹಾಗೇ ನಡೆಸಿಕೊಂಡರೇ, ಸ್ವತಃ ಸಚಿವರೇ ಆರೋಪ ಮಾಡಿದರೂ ಯಾಕೆ ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ಪ್ರಶ್ನಿಸಿದರು.
ಇದೇ ಸಂದರ್ಭದಲ್ಲಿ ಎಂಎಲ್‌ಸಿ ಆರ್.ರಾಜೇಂದ್ರ ಅವರ ಕೊಲೆ ಯತ್ನದ ಸುಪಾರಿಯ ಬಗ್ಗೆ ಮಾತನಾಡಿದ ಅವರು, ಸರ್ಕಾರದ ಸಚಿವರೇ ಸದನದ ಒಳಗೆ ಹನಿಟ್ರ್ಯಾಪ್ ಬಗ್ಗೆ ಆರೋಪ ಮಾಡಿದ್ದರು. ಇದೀಗ ಅವರ ಮಗ ಕೊಲೆ ಕೇಸ್ ಬಗ್ಗೆ ಆರೋಪ ಮಾಡಿದ್ದಾರೆ. ಹಾಗಾಗಿ ಈ ಎಲ್ಲಾ ವಿಚಾರವನ್ನು ರಾಜ್ಯದ ಜನರಿಗೆ ಬಿಡುತ್ತೇನೆ. ಅವರೇ ಈ ವಿಚಾರಗಳ ಬಗ್ಗೆ ತೀರ್ಮಾನ ಮಾಡಲಿ ಎಂದರು.
ಇನ್ನು ಸಚಿವರು ಹನಿಟ್ರ್ಯಾಪ್ ವಿಚಾರದಲ್ಲಿ ಮೊದಲು ಸಿನಿಮಾ ಟೀಸರ್ ತೋರಿಸಿದರು. ಆದರೆ ಇದೀಗ ಒಳಗೆ ಸಿನಿಮಾ ಬೇರೆಯೇ ಆಗಿದೆ. ಅದೇನು ರಾಜ್ಯದ ಜನತೆಗೆ ಬಿಡುತ್ತೇನೆ. ಆದರೆ ಹನಿಟ್ರ್ಯಾಪ್ ವಿಚಾರ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದ್ದು, ವಿಧಾನಸೌಧದಲ್ಲಿ ಈ ಬಗ್ಗೆ ಪ್ರಸ್ತಾಪ ಆಗುವುದು ಅತ್ಯಂತ ಮಾರಕವಾದ ಸಂಗತಿಯಾಗಿದೆ. ಅಲ್ಲದೇ ಯಾವುದೋ ಸ್ಥಾನದ ಮೇಲೆ ಅಪೇಕ್ಷೆ ಇಟ್ಟವರು ಹೀಗೆ ಅಡ್ಡದಾರಿ ಹಿಡಿದಿದ್ದಾರೆ. ಹೀಗಾಗಿ ವಾಮಮಾರ್ಗದಲ್ಲಿ ತೇಜೋವಧೆ ಮಾಡೋದು ಸರಿಯಲ್ಲ, ಇದು ಸಮಾಜಕ್ಕೆ ಮಾರಕವಾಗಿದೆ ಎಂದು ಹೇಳಿದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…