ರಾಜ್ಯ

ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬುದಕ್ಕೆ ರಾಯರೆಡ್ಡಿ ಹೇಳಿಕೆಯೇ ಸಾಕ್ಷಿ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬುದಕ್ಕೆ ಸಿಎಂ ಅವರ ಆರ್ಥಿಕ ಸಲಹೆಗಾರ ಬಸವರಾಜ್‌ ರಾಯರೆಡ್ಡಿ ಹೇಳಿಕೆಯೇ ಸಾಕ್ಷಿ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರ್‌ ಸ್ವಾಮಿ ಆರೋಪಿಸಿದ್ದಾರೆ.

ನಗರದ ಜೆಪಿ ಭವನದಲ್ಲಿ ಇಂದು(ಏಪ್ರಿಲ್‌.9) ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರರು ಮುಕ್ತವಾಗಿ ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಿರುವುದಕ್ಕೆ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ. ಅವರ ಹೇಳಿಕೆಯಿಂದಲೇ ಕರ್ನಾಟಕ ರಾಜ್ಯ ಭ್ರಷ್ಟಾಚಾರದಲ್ಲಿ ಮೊದಲ ಸ್ಥಾನದಲ್ಲಿದೆ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದರು.

ಈ ಹಿಂದೆಯೂ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಮೇಲೆ ಪರಿಣಾಮ ಬೀರಿದೆ. ಈ ಯೋಜನೆಗಳಿಂದ ಸರ್ಕಾರ ಅಭಿವೃದ್ಧಿ ಹಣ ನೀಡಲು ಆಗುತ್ತಿಲ್ಲ. ಹಾಗಾಗಿಯೇ ಅಭಿವೃದ್ಧಿ ಕುಂಠಿತವಾಗಿದೆ ಎಂದು ಹೇಳಿದ್ದರು. ಇದನ್ನೆಲ್ಲಾ ನೋಡಿದರೆ ಕಾಂಗ್ರೆಸ್‌ ಸರ್ಕಾರ ಹೇಗೆ ಆಡಳಿತ ನಡೆಸುತ್ತಿದೆ ಹಾಗೂ ಸರ್ಕಾರದ ವೈಫಲ್ಯವನ್ನು ತೋರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಅರ್ಚನ ಎಸ್‌ ಎಸ್

Recent Posts

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

36 mins ago

ಆರೋಗ್ಯ ಇಲಾಖೆಯ ಅಧಿಕಾರಿ ಅಬಕಾರಿ ಡಿಸಿಯಾಗಿ ನಿಯೋಜನೆ : ನಿಯಮ ಉಲ್ಲಂಘನೆ ಆರೋಪ

ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…

1 hour ago

ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯುವ ಆಸೆ ಇದೆ : ಶಾಸಕ ಕೆ.ಹರೀಶ್‌ ಗೌಡ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…

2 hours ago

ಭೀಕರ ಸರಣಿ ಅಪಘಾತ : ಬೆಂಗಳೂರಿನ 6 ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…

2 hours ago

ಓದುಗರ ಪತ್ರ | ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…

2 hours ago

ಶಿವರಾತ್ರಿ ಜಾತ್ರೆ | ಮ.ಬೆಟ್ಟದಲ್ಲಿ ಸಕಲ ಸಿದ್ಧತೆ ; ನಾಳೆಯಿಂದ ಐದು ದಿನ ಸಂಭ್ರಮ

ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…

3 hours ago