ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಶನಿವಾರ ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್‌ನಲ್ಲಿ ಸ್ಯಾಂಡಲ್‌ವುಡ್ ಕಲಾವಿದರಿಗೆ ವಾರ್ನಿಂಗ್ ನೀಡಿದ್ದರು. ಆದರೆ ಇದೀಗ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಡಿಸಿಎಂ ಡಿಕೆಶಿ ಅವರಿಂದ ಆ ಹೇಳಿಕೆಯನ್ನು ಯಾರು ನಿರೀಕ್ಷಿಸಿರಲಿಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ. ಶಿವಕುಮಾರ್ ಅವರ ವಾರ್ನಿಂಗ್‌ಗೆ ಯಾರೂ ಹೆದರಿ ಕೂರೋದಿಲ್ಲ. ಡಿಕೆಶಿ ಹೇಳಿಕೆ ಕಲಾವಿದರು, ನಿರ್ಮಾಪಕ, ನಿರ್ದೇಶಕರು ಹಾಗೂ ತಂತ್ರಜ್ಞರ ಮನಸ್ಸಿಗೆ ನೋವು ಉಂಟು ಮಾಡಿದೆ. ಕಲಾವಿದರು ತುಂಬಾ ಸೂಕ್ಷ್ಮ ಸ್ವಭಾವದ ವ್ಯಕ್ತಿಗಳು. ಡಾ.ರಾಜ್‌ಕುಮಾರ್ ಹೋರಾಟ ಮಾಡಿದಾಗ ಇಡೀ ಚಿತ್ರರಂಗ ಭಾಗಿಯಾಗಿತ್ತು. ಯಾರು ಹೋರಾಟಕ್ಕೆ ಕೈ ಜೋಡಿಸಲ್ಲ ಎಂದು ಹೇಳಿರಲಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದವರು ರಾಜ್ಯದಲ್ಲಿ ಚುನಾವಣೆ ವೇಳೆ ಮೇಕೆದಾಟು ಪಾದಯಾತ್ರೆ ಮಾಡಿದ್ದರು. ಅದು ರಾಜಕೀಯ ಪ್ರೇರಿತ ಪಾದಯಾತ್ರೆಯಾಗಿತ್ತು. ಹೀಗಾಗಿ ಸಿನಿಮಾ ನಟ-ನಟಿಯರು ರಾಜಕೀಯ ಪ್ರೇರಿತ ಪಾದಯಾತ್ರೆಯಲ್ಲಿ ಭಾಗವಹಿಸುವುದು ಸೂಕ್ತ ಅಲ್ಲವೆಂಬ ಕಾರಣಕ್ಕೆ ಭಾಗಿಯಾಗಿರಲಿಲ್ಲ. ಅಲ್ಲದೇ ಈ ವಿಚಾರದಲ್ಲಿ ಅವರು ಭಾಗಿಯಾಗದೇ ಇರುವುದು ಅವರ ವೈಯಕ್ತಿಕ ಅಭಿಪ್ರಾಯ ಇರಬಹುದು. ಯಾರಿಗೂ ನೀವು ಕಟ್ಟುನಿಟ್ಟಾಗಿ ಹೋರಾಟದಲ್ಲಿ ಭಾಗಿಯಾಗಿ ಎಂದು ತಾಕೀತು ಮಾಡಿದರೂ, ಇಲ್ಲಿ ಯಾರು ಕೇಳೋರು ಇಲ್ಲ ಎಂದು ತಿರುಗೇಟು ನೀಡಿದ್ದಾರೆ.
ಇನ್ನು ರಾಜ್ಯದಲ್ಲಿ ಸಾಕಷ್ಟು ಸರ್ಕಾರಗಳು ಬಂದಿವೆ, ಹೋಗಿವೆ. ಸಿನಿಮಾ ರಂಗದವರು ರಾಜ್ಯದಲ್ಲಿ ಅನೇಕ ಮುಖ್ಯಮಂತಿಗಳನ್ನು ನೋಡಿದ್ದಾರೆ. ಆದರೆ ರಾಜ್ಯದ ರಾಜಕೀಯದಲ್ಲಿ ಇಂತಹ ಹೇಳಿಕೆಯನ್ನು ಯಾರೂ ನೀಡಿಲ್ಲ. ಹಾಗಾಗಿ ಇಂತಹ ಹೇಳಿಕೆಯಿಂದ ಕಲಾವಿದರನ್ನು ಪ್ರಚೋದನೆ ಮಾಡೋದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಿನಿಮಾ ಕಲಾವಿದರು ತಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆದ ಸಮಯದಲ್ಲಿ ಹೊರಗೆ ಬಂದು ಮುಂದಿನ ದಿನಗಳಲ್ಲಿ ಮಾತನಾಡುತ್ತಾರೆ. ಕಲಾವಿದರು ತಮ್ಮ ಶ್ರಮದಿಂದ ಗೌರವದ ಬದುಕು ಕಟ್ಟಿಕೊಂಡಿದ್ದಾರೆ. ಅಲ್ಲದೇ ಕಷ್ಟಪಟ್ಟು ಸಾಲ ಮಾಡಿ ಸಿನಿಮಾ ಮಾಡುತ್ತಾರೆ. ಹೀಗಾಗಿ ಕಲಾವಿದರ ಮೇಲೆ ದಬ್ಬಾಳಿಕೆ ಹಾಗೂ ದೌರ್ಜನ್ಯದ ಹೇಳಿಕೆಗಳನ್ನು ನೀಡುವುದನ್ನು ಈ ರಾಜ್ಯದ ಜನತೆ ಸಹಿಸೋದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರದ ವಿರುದ್ಧ ಇಂದು 9ಕ್ಕೂ ಹೆಚ್ಚು…
ಕೆ.ಆರ್.ಪೇಟೆ: ಗಾಂಜಾ ಮತ್ತು ಮಧ್ಯ ಸೇವಿಸಿದ ಅಮಲಿನಲ್ಲಿ ಶಾಲಾ ಬಸ್ ತಡೆದು, ಅಪ್ರಾಪ್ತ ಬಾಲಕಿಯನ್ನು ತಮ್ಮ ವಶಕ್ಕೆ ನೀಡುವಂತೆ ಕಿರಿಕ್…
ಇತ್ತೀಚೆಗೆ ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ ಅನೇಕ ಸರ್ಕಾರಿ ಶಾಲೆಗಳು ಹಳೆಯ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡು…
ಭಾರತಕ್ಕೆ ಭೇಟಿ ನೀಡಿದ್ದ ರಷ್ಯಾ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಅತ್ಯಂತ ಭವ್ಯ ರೀತಿಯಲ್ಲಿ ಸ್ವಾಗತ ನೀಡಿ, ಆ…
ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್‌ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್…
ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ…