ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ.
43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ ವೈರಸ್ ಸೋಂಕು ಹರಡಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಜನರಿಗೆ ಎಚ್ಚರಿಕೆಯಿಂದ ಇರಲು ಸರ್ಕಾರ ಹೈಅಲರ್ಟ್ ಘೋಷಣೆ ಮಾಡಿದೆ.
ಸೋಂಕಿತನ ಗಂಟಲು ದ್ರವದ ಮಾದರಿಗಳನ್ನು ಪುಣೆಯ ನ್ಯಾಷನಲ್ ಇನ್ಸ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸಲಾಗಿದ್ದು, ವರದಿಯು ನಾಳೆ ಸಂಜೆಯೊಳಗೆ ಲಭ್ಯವಾಗಲಿದೆ.




