Mysore
31
scattered clouds
Light
Dark

ಮೈಸೂರು ಸೇರಿದಂತೆ ರಾಜ್ಯದ 27 ವೈದ್ಯಕೀಯ ಕಾಲೇಜುಗಳಿಗೆ ದಂಡ

ಮೈಸೂರು: ರಾಷ್ಟ್ರೀಯ ವೈದ್ಯಕೀಯ ಆಯೋಗವು 11 ಖಾಸಗಿ ವೈದ್ಯಕೀಯ ಕಾಲೇಜುಗಳು ಸೇರಿದಂತೆ ಒಟ್ಟು 27 ವೈದ್ಯಕೀಯ ಕಾಲೇಜುಗಳಿಗೆ ಸರಿಯಾದ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸದ ಕಾರಣ ದಂಡ ವಿಧಿಸಿದೆ.

ಭೋದನೆ ಮಾಡಲು ಬೇಕಾದಷ್ಟು ಅಧ್ಯಾಪಕರ ಕೊರತೆ, ಸರಿಯಾದ ಪ್ರಯೋಗಾಲಯ ಇಲ್ಲದೇ ಇರುವುದು, ರೋಗಿಗಳ ಮಾಹಿತಿಯನ್ನು ಸರಿಯಾಗಿ ನಿಭಾಯಿಸದೇ ಇರುವುದು, ತನಿಖಾ ಸಮಯದಲ್ಲಿ ಸೂಕ್ತ ದಾಖಲೆ ಒದಗಿಸದೇ ಇರುವುದು ಹಾಗೂ ಉಪಕರಣಗಳ ಕೊರತೆ ಇರುವ ಕಾಲೇಜುಗಳ ಮೇಲೆ ರಾಷ್ಟ್ರೀಯ ವೈದ್ಯಕೀಯ ಆಯೋಗವು 2ರಿಂದ 15 ಲಕ್ಷ ರೂಪಾಯಿಗಳವರೆಗೆ ದಂಡವನ್ನು ಹೇರಿದೆ.

ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ, ಯಾದಗಿರಿ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಕಾರವಾರ, ಹುಬ್ಬಳ್ಳಿ ಮತ್ತು ಕಲಬುರಗಿ ಸರ್ಕಾರಿ ವೈದ್ಯಕೀಯ ಕಾಲೇಜುಗಳು ದಂಡಕ್ಕೊಳಗಾಗಿವೆ. ಮಂಡ್ಯ ಸರ್ಕಾರಿ ವೈದ್ಯಕೀಯ ಕಾಲೇಜಿಗೆ 15 ಲಕ್ಷ ರೂಪಾಯಿ ದಂಡ ವಿಧಿಸಲಾಗಿದ್ದರೆ, ಚಾಮರಾಜನಗರ, ಮೈಸೂರು ಮತ್ತು ಕೊಡಗು ವೈದ್ಯಕೀಯ ಕಾಲೇಜುಗಳಿಗೆ ತಲಾ 3 ಲಕ್ಷ ರೂಪಾಯಿಗಳ ದಂಡ ವಿಧಿಸಲಾಗಿದೆ.