ರಾಜ್ಯ

ಮಾಲ್‌ ಆಫ್‌ ಏಷ್ಯಾ ವಿರುದ್ಧ ಕ್ರಮ ಬೇಡ: ಹೈಕೋರ್ಟ್‌

ಬೆಂಗಳೂರು : ಒಂದು ದಿನದ ಮಟ್ಟಿಗೆ ಮಾಲ್ ಅನ್ನು ಮುಚ್ಚಲಾಗುವುದು ಎಂಬ ಮಾಲ್ ಆಫ್ ಏಷ್ಯಾದ ಪರ ವಕೀಲರ ಭರವಸೆ ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್, ಮುಂದಿನ ವಿಚಾರಣೆವರೆಗೂ ಮಾಲ್ ವಿರುದ್ದ ಕ್ರಮಕ್ಕೆ ಮುಂದಾಗದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ.

ಡಿಸೆಂಬರ್ 31 ಮತ್ತು ಜನವರಿ 15ರ ನಡುವೆ ಮಾಲ್‌ಗೆ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಿ ನಗರ ಪೊಲೀಸ್ ಆಯುಕ್ತರು ಹೊರಡಿಸಿದ ಆದೇಶ ಪ್ರಶ್ನಿಸಿ ಫೀನಿಕ್ಸ್ ಮಾಲ್ ಆಫ್ ಏಷ್ಯಾದ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿಯನ್ನು ಭಾನುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ಜೆ. ಎಸ್. ಕಮಲ್ ಅವರಿದ್ದ ವಿಶೇಷ ಪೀಠದ ಮುಂದೆ ಮಾಲ್ ಪರ ವಕೀಲರು ಮಾಹಿತಿ ನೀಡಿದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮಾಲ್ ಆಡಳಿತವು ಮಾಲ್ ಒಂದು ದಿನದ ಮಟ್ಟಿಗೆ ಮುಚ್ಚಲಾಗುವುದು. ಜತೆಗೆ, ಪೊಲೀಸ್ ಆಯುಕ್ತರ ಆದೇಶದಲ್ಲಿ ತಿಳಿಸಿರುವ ಸಮಸ್ಯೆಗಳಿಗೆ ಸೌಹಾರ್ದಯುತವಾಗಿ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮಾಲ್ ಪರ ವಕೀಲರು ಭರವಸೆ ನೀಡಿದರು.

ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು. ಅಲ್ಲದೆ, ಸೌಹಾರ್ದಯುತವಾಗಿ ಪರಿಹರಿಸುವವರೆಗೆ ಅಥವಾ ನ್ಯಾಯಾಲಯದಿಂದ ಮುಂದಿನ ಆದೇಶವನ್ನು ನೀಡುವವರೆಗೆ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಪೀಠ ತಿಳಿಸಿದೆ.

andolanait

Recent Posts

ಪ್ರಧಾನಿ ವಿರುದ್ಧ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಯದುವೀರ್‌ ಆಗ್ರಹ

ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…

14 mins ago

ಗೃಹ ಬಳಕೆ, ಕೈಗಾರಿಕೆಗೆ ದಿನದ 24 ಗಂಟೆಯೂ ವಿದ್ಯುತ್

ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…

18 mins ago

ಬೆಳಗಾವಿ ಅಧಿವೇಶನದಲ್ಲೂ ನಟ ದರ್ಶನ್‌ ಬಗ್ಗೆ ಚರ್ಚೆ : ಏನದು?

ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…

20 mins ago

ದಿ ಡೆವಿಲ್‌ ಚಿತ್ರದ ವಿಮರ್ಶೆ ಹಂಚಿಕೊಂಡ ಪತ್ನಿ ವಿಜಯಲಕ್ಷ್ಮಿ….!

ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…

28 mins ago

ಸರ್ಕಾರಿ ಶಾಲೆಗಳಿಗೆ ಗುಡ್‌ನ್ಯೂಸ್‌ : ಶಾಲಾ ಕೊಠಡಿ ದುರಸ್ಥಿಗೆ ರೂ.360 ಕೋಟಿ ಬಿಡುಗಡೆ

ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…

41 mins ago

ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…

47 mins ago