ರಾಜ್ಯ

ಹೈಕಮಾಂಡ್‌ ಮುಂದೆ ಹೆಚ್ಚುವರಿ ಡಿಸಿಎಂ ಪ್ರಸ್ತಾವನೆ ಇಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಲೋಕಸಭಾ ಚುನಾವಣೆಗೂ ಮುನ್ನ ಕರ್ನಾಟಕದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರವಾಗಿ ಸಿಎಂ ಸಿದ್ದರಾಯ್ಯ ಆಪ್ತಬಣ ಪಟ್ಟು ಹಿಡಿದಿದೆ ಎಂಬ ರಾಜಕೀಯ ವಲಯದಲ್ಲಿ ಚರ್ಚೆಗಳು ಹೆಚ್ಚಾಗಿದ್ದು, ಇದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೆರೆ ಎಳೆದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರ ಹೈಕಮಾಂಡ್‌ ಮುಂದೆ ಪ್ರಸ್ತಾವನೆಯಿಲ್ಲ. ಈ ವಿಷಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನೇ ಕೇಳಿ ಎಂದು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಗಳೊಂದಿಗೆ ಮಾತನಾಡಿದ ಅವರು, ಮೂರು ಡಿಸಿಎಂ ಹುದ್ದೆ ವಿಚಾರ ನಮ್ಮ ಮುಂದೆ ಇಲ್ಲ. ಇವೆಲ್ಲವೂ ಕೇವಲ ಉಹಾಪೋಹ. ಚುನಾವಣೆ ಸಂದರ್ಭದಲ್ಲಿ ಇಂತಹ ವಿಚಾರಗಳು ಚರ್ಚೆಗೆ ಬರಬಾರದು. ಸದ್ಯ ಸರ್ಕಾರದ ಗಮನ ಅಭಿವೃದ್ಧಿ ಕಡೆ, ಗ್ಯಾರೆಂಟಿಗಳ ಸಮರ್ಪಕ ಅನುಷ್ಠಾನದ ಕಡೆ ಇರಬೇಕು. ನಮ್ಮ ಗುರಿ ತಲುಪುವ ತನಕ ಗಮನ ಬೇರೆಡೆಗೆ ಕೊಡಬಾರದು ಎಂದು ಕರೆ ನೀಡಿದ್ದಾರೆ.

ಇನ್ನು ನಾಳೆ(ಜನವರಿ ೧೦) ಲೋಕಸಭಾ ಚುನಾವಣೆಗೆ ಕರ್ನಾಟಕ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು, ಇಳಿಸಬಾರದು ಎಂಬುದರ ಬಗ್ಗೆ ಚರ್ಚೆ ಮಾಡಲಿದ್ದೇವೆ. ಈಗಾಗಲೇ ಎಲ್ಲಾ ಕ್ಷೇತ್ರಗಳಿಗೆ ವೀಕ್ಷಕರ ನೇಮಕ ಮಾಡಲಾಗಿದ್ದು, ನಾಳೆ ನಡೆಯಲಿರುವ ಸಭೆಯೊಂದಿಗೆ ಅನೇಕ ಘಟಕಗಳ ಸಭೆ ಕೂಡ ಕರೆದಿದ್ದೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಭಾರತ ಮತ್ತು ಮಾಲ್ಡೀವ್ಸ್‌ ಸಡುವಿನ ಬಿಗುವಿನ ವಾತಾವರಣ ಬಗ್ಗೆ ಮಾತನಾಡಿರುವ ಖರ್ಗೆ, ಮೊದಲು ನಾವು ನರೆಯವರೊಂದಿಗೆ ಚೆನ್ನಾಗಿರಬೇಕು. ಜೊತೆಗೆ ಕೆಟ್ಟ ಪರಿಸ್ಥಿತಿ ಬಂದಾಗ ಹೋರಾಟಕ್ಕೂ ಸಿದ್ದವಿರಬೇಕು. ಇಂದಿರಾ ಗಾಂಧಿ ಅವರು ಪಾಕಿಸ್ತಾನವನ್ನು ಬೇರ್ಪಡಿಸಿ ಹೇಗೆ ಬಾಂಗ್ಲಾದೇಶ ನಿರ್ಮಾಣ ಮಾಡಿದರೋ ಹಾಗೆ ಹೋರಾಟ ಮಾಡಬೇಕು. ಆದರೆ ಪ್ರಧಾನಿ ಮೋದಿ ಅವರು ಎಲ್ಲವನ್ನು ವಯಕ್ತಿಕವಾಗಿ ತೆಗೆದುಕೊಳ್ಳುತ್ತಾರೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

andolanait

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

2 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

2 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

3 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago