Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಮಧ್ಯಂತರ ಆದೇಶ ವಿಸ್ತರಿಸಿದ ನ್ಯಾಯಾಲಯ

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ರಿಲೀಫ್‌ ಸಿಕ್ಕಿದೆ.

ಯಡಿಯೂರಪ್ಪ ಅವರನ್ನು ಪೊಲೀಸರು ಬಂಧಿಸಬಾರದು ಮತ್ತು ವಿಚಾರಣೆಗಾಗಿ ಅವರ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿದೆ ಎಂಬ ತನ್ನ ಮಧ್ಯಂತರ ಆದೇಶವನ್ನು ಕೋರ್ಟ್‌ ಪುನಃ ವಿಸ್ತರಿಸಿದೆ.

ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿರುವ ರಿಟ್‌ ಅರ್ಜಿ ಮತ್ತು ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯನ್ನು ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಮುಂದೆ ಇಂದು ನಿಗದಿಪಡಿಸಲಾಗಿತ್ತು.

ಆದರೆ, ದಿನದ ಕಾಸ್‌ಲಿಸ್ಟ್‌ನಲ್ಲಿ ಪ್ರಕರಣದ ಸಂಖ್ಯೆ ನಮೂದಾಗಿರದ ಕಾರಣ ವಿಶೇಷ ಪ್ರಾಸಿಕ್ಯೂಟರ್‌ ಅಶೋಕ್‌ ಎನ್.ನಾಯಕ್‌ ಅವರು ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳುವಂತೆ ತುರ್ತು ಮೆಮೋ ಸಲ್ಲಿಸಿದರು.

ಈ ಮೆಮೋವನ್ನು ನ್ಯಾಯಪೀಠ ಸಂಜೆ 5 ಗಂಟೆಗೆ ಕೈಗೆತ್ತಿಕೊಂಡಿತು. ಈಗ ಸಂಜೆ 5 ಗಂಟೆಯಾಗಿರುವ ಕಾರಣ ವಾದ ಆಲಿಸಲು ಸಮಯಾವಕಾಶದ ಕೊರತೆಯಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್‌ ಈ ಪ್ರಕರಣದ ವಿಚಾರಣೆಯನ್ನು ಆಗಸ್ಟ್.‌30ಕ್ಕೆ ಮುಂದೂಡಿದೆ.

Tags: