ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ರಿಲೀಫ್ ಸಿಕ್ಕಿದೆ.
ಯಡಿಯೂರಪ್ಪ ಅವರನ್ನು ಪೊಲೀಸರು ಬಂಧಿಸಬಾರದು ಮತ್ತು ವಿಚಾರಣೆಗಾಗಿ ಅವರ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿದೆ ಎಂಬ ತನ್ನ ಮಧ್ಯಂತರ ಆದೇಶವನ್ನು ಕೋರ್ಟ್ ಪುನಃ ವಿಸ್ತರಿಸಿದೆ.
ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿರುವ ರಿಟ್ ಅರ್ಜಿ ಮತ್ತು ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯನ್ನು ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಮುಂದೆ ಇಂದು ನಿಗದಿಪಡಿಸಲಾಗಿತ್ತು.
ಆದರೆ, ದಿನದ ಕಾಸ್‌ಲಿಸ್ಟ್‌ನಲ್ಲಿ ಪ್ರಕರಣದ ಸಂಖ್ಯೆ ನಮೂದಾಗಿರದ ಕಾರಣ ವಿಶೇಷ ಪ್ರಾಸಿಕ್ಯೂಟರ್ ಅಶೋಕ್ ಎನ್.ನಾಯಕ್ ಅವರು ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳುವಂತೆ ತುರ್ತು ಮೆಮೋ ಸಲ್ಲಿಸಿದರು.
ಈ ಮೆಮೋವನ್ನು ನ್ಯಾಯಪೀಠ ಸಂಜೆ 5 ಗಂಟೆಗೆ ಕೈಗೆತ್ತಿಕೊಂಡಿತು. ಈಗ ಸಂಜೆ 5 ಗಂಟೆಯಾಗಿರುವ ಕಾರಣ ವಾದ ಆಲಿಸಲು ಸಮಯಾವಕಾಶದ ಕೊರತೆಯಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಆಗಸ್ಟ್.30ಕ್ಕೆ ಮುಂದೂಡಿದೆ.
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…
ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…