madhu bangarappa
ಕೊಪ್ಪಳ: ಹಿಂದುತ್ವ ಹಾಗೂ ದೇವಸ್ಥಾನದ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಡಿದ ಮಾತುಗಳು ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.
ಕೊಪ್ಪಳದಲ್ಲಿಂದು ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ನನ್ನ ಬಳಿ ಜನರು ದೇವಸ್ಥಾನಕ್ಕೆಂದು ದುಡ್ಡು ಕೇಳಿಕೊಂಡು ಬರ್ತಾರೆ ಅಂದ್ರೆ, ನಾನು ಯಾವ ದೇವಸ್ಥಾನಕ್ಕೂ ಹಣ ನೀಡೋದಿಲ್ಲ ಎಂದರು. ದೇವಸ್ಥಾನದಲ್ಲಿ ಗಂಟೆ ಹೊಡೆದರೆ ದೇಶದಲ್ಲಿ ಏನಾಗುತ್ತೋ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಯಾವ ದೇವಸ್ಥಾನಕ್ಕೂ ಹಣ ನೀಡುವುದಿಲ್ಲ. ದೇವಸ್ಥಾನದಲ್ಲಿ ಗಂಟೆ ಹೊಡೆಯೋದಕ್ಕಿಂತ ಶಾಲೆಯಲ್ಲಿ ಗಂಟೆಯ ಶಬ್ಧ ಕೇಳಬೇಕು. ದೇವಸ್ಥಾನದಲ್ಲಿ ಗಂಟೆ ಹೊಡೆಯೋದ್ರಿಂದ ಯಾವುದೇ ಪ್ರಯೋಜನವಿಲ್ಲ ಎನ್ನುವ ಮಾತುಗಳು ಮತ್ತೊಂದು ವಿವಾದದ ಕಿಡಿ ಎಬ್ಬಿಸಿದೆ.
ಇನ್ನು ಕೆಲವರು ಹಿಂದುತ್ವ, ಹಿಂದುತ್ವ ಎಂದು ಮಾತನಾಡುತ್ತಾರೆ. ಹಿಂದುತ್ವ ಎಂದು ಬೊಬ್ಬೆ ಬಡಿದುಕೊಳ್ಳುವವರಿಗೇನು ಗೊತ್ತು ಬದನೆಕಾಯಿ ಎಂದು ಬಿಜೆಪಿ ವಿರುದ್ಧ ಪರೋಕ್ಷವಾಗಿ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದ್ದಾರೆ.
ಸಚಿವರ ಈ ಮಾತು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದು, ಹಿಂದೂ ಪರ ಹೋರಾಟಗಾರರಿಂದ ವಿರೋಧ ವ್ಯಕ್ತವಾಗಿದೆ.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…