ಬೆಂಗಳೂರು: ರಾಜ್ಯದಲ್ಲಿ ಯಾವುದೇ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲ್ಲ. ಇದೆಲ್ಲಾ ಕೇವಲ ಊಹಾಪೋಹ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಬಿಪಿಎಲ್ ಕಾರ್ಡ್‌ಗಳನ್ನು ಕಡಿತ ಮಾಡಲ್ಲ. ತೆರಿಗೆ ಪಾವತಿ ಮಾಡುತ್ತಿರುವ ಕುಟುಂಬಸ್ಥರು ಬಿಪಿಎಲ್ ಕಾರ್ಡ್ ಪಡೆಯಲು ಅರ್ಹರಲ್ಲ ಎಂದು ನಿಯಮದಲ್ಲಿದೆ.
ಸುಳ್ಳು ದಾಖಲೆ ನೀಡಿ ಅಧಿಕಾರಿಗಳ ಮನವೊಲಿಸಿ ಬಿಪಿಎಲ್ ಕಾರ್ಡ್ ಪಡೆದಿರುವುದು ತಪ್ಪು ತಾನೇ ಎಂದು ಪ್ರಶ್ನೆ ಮಾಡಿದರು.
ಇನ್ನು ರಾಜ್ಯ ಸರ್ಕಾರ ಬಡವರ ಅನ್ನ ಕಿತ್ತುಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ಕುಮಾರಸ್ವಾಮಿ ಅವರು ದೊಡ್ಡ ಜವಾಬ್ದಾರಿಯಲ್ಲಿದ್ದಾರೆ. ರಾಜ್ಯಕ್ಕೆ ದೊಡ್ಡ ಕೈಗಾರಿಕೆ, ಸ್ಟೀಲ್ ಇಂಡಸ್ಟ್ರೀಸ್ ನೀಡಲಿ. ರಾಜ್ಯ ಅಭಿವೃದ್ಧಿಯತ್ತ ಹೋಗಲು ದೊಡ್ಡ ದೊಡ್ಡ ಕೆಲಸ ಮಾಡಲಿ ಎಂದು ಸಲಹೆ ನೀಡಿದರು.