ರಾಜ್ಯ

ಯಾವುದೇ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಲ್ಲ: ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಲ್ಲ. ಇದೆಲ್ಲಾ ಕೇವಲ ಊಹಾಪೋಹ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಬಿಪಿಎಲ್‌ ಕಾರ್ಡ್‌ಗಳನ್ನು ಕಡಿತ ಮಾಡಲ್ಲ. ತೆರಿಗೆ ಪಾವತಿ ಮಾಡುತ್ತಿರುವ ಕುಟುಂಬಸ್ಥರು ಬಿಪಿಎಲ್‌ ಕಾರ್ಡ್‌ ಪಡೆಯಲು ಅರ್ಹರಲ್ಲ ಎಂದು ನಿಯಮದಲ್ಲಿದೆ.

ಸುಳ್ಳು ದಾಖಲೆ ನೀಡಿ ಅಧಿಕಾರಿಗಳ ಮನವೊಲಿಸಿ ಬಿಪಿಎಲ್‌ ಕಾರ್ಡ್‌ ಪಡೆದಿರುವುದು ತಪ್ಪು ತಾನೇ ಎಂದು ಪ್ರಶ್ನೆ ಮಾಡಿದರು.

ಇನ್ನು ರಾಜ್ಯ ಸರ್ಕಾರ ಬಡವರ ಅನ್ನ ಕಿತ್ತುಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ಕುಮಾರಸ್ವಾಮಿ ಅವರು ದೊಡ್ಡ ಜವಾಬ್ದಾರಿಯಲ್ಲಿದ್ದಾರೆ. ರಾಜ್ಯಕ್ಕೆ ದೊಡ್ಡ ಕೈಗಾರಿಕೆ, ಸ್ಟೀಲ್‌ ಇಂಡಸ್ಟ್ರೀಸ್ ನೀಡಲಿ. ರಾಜ್ಯ ಅಭಿವೃದ್ಧಿಯತ್ತ ಹೋಗಲು ದೊಡ್ಡ ದೊಡ್ಡ ಕೆಲಸ ಮಾಡಲಿ ಎಂದು ಸಲಹೆ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

3 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

4 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

6 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

7 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

8 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

8 hours ago