ರಾಜ್ಯ

ಸ್ವಜಾತಿ ಪಕ್ಷಪಾತ ಬೇಡ ; ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸಿ : ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು : ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶುಕ್ರವಾರ ವಿಧಾನಸೌಧದ ಸಭಾಂಗಣದಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ ಕ್ಯಾಲೆಂಡರ್ ಮತ್ತು ದಿನಚರಿಯನ್ನು ಬಿಡುಗಡೆಗೊಳಿಸಿ, ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿನ ಬಡವರು, ದಲಿತರು, ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ವಿಶೇಷ ಕಾಳಜಿಯಿಂದ ಹಾಗೂ ಹೊಸ ಉತ್ಸಾಹದಿಂದ ಎಲ್ಲರೂ ಕಾರ್ಯ ನಿರ್ವಹಿಸಬೇಕೆಂದರು. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ರಾಜಕೀಯ ಸ್ವಾತಂತ್ರ್ಯ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯದ ಮೇಲೆ ನಿಂತಿದೆ. ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗಬೇಕಾದರೆ ಎಲ್ಲರಿಗೂ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಗಬೇಕಿದೆ. ಇಲ್ಲವಾದಲ್ಲಿ ಅಸಮಾನತೆ ಹೋಗಲು ಸಾಧ್ಯವಿಲ್ಲ, ಅಂತೆಯೇ ಅಸಮಾನತೆ ತೊಲಗದೇ, ಸಮಾಜದಲ್ಲಿ ಶಾಂತಿ ನೆಮ್ಮದಿ ನೆಲೆಸುವುವೂ ಅಸಾಧ್ಯ ಎಂದು ಹೇಳಿದ್ದನ್ನು ತಿಳಿಸಿದರು.

ಸಮಸಮಾಜಕ್ಕೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಅಗತ್ಯ
ಎಲ್ಲರಿಗೂ ಸಮಾನ ಅವಕಾಶ ದೊರೆತು, ಸಮಾಜದ ಮುಖ್ಯವಾಹಿನಿಗೆ ಬರುವಂತಾದಗ ಮಾತ್ರರೆ ಮಾತ್ರ ಸಮಾನತೆ ಬರಲು ಸಾಧ್ಯ. ನಮ್ಮ ಸಮಾಜ ಜಾತಿ ವ್ಯವಸ್ಥೆಯಿಂದ ಕೂಡಿದೆ. ಜಾತಿ ಮತ್ತು ವರ್ಗ ವ್ಯವಸ್ಥೆ ಅಳಿಯಬೇಕಾದರೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಗಲೇಬೇಕು ಎಂದರು.

ಸ್ವಜಾತಿ ಪಕ್ಷಪಾತ ಬೇಡ- ಅಧಿಕಾರಿಗಳಿಗೆ ಸಿಎಂ ಸೂಚನೆ
ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದರೂ ಇನ್ನೂ ಜಾತಿ ವ್ಯವಸ್ಥೇ ನಿರ್ಮೂಲನೆಯಾಗಿಲ್ಲ. ಎಲ್ಲಾ ಅಧಿಕಾರಿಗಳು ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸಬೇಕು. ನಮ್ಮ ದೃಷ್ಟಿಕೋನ ಜಾತ್ಯಾತೀತವಾಗಿರಬೇಕು. ಯಾವುದೇ ಕಾರಣಕ್ಕೂ ಸ್ವಜಾತಿ ಪಕ್ಷಪಾತ ಮಾಡಬಾರದು. ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಅಧಿಕಾರಿಗಳು ಪ್ರಾಮಾಣಿಕವಾಗಿರಬೇಕು
ಬಡವರ ಒಳಿತಿಗೆ ಕರ್ತವ್ಯ ನಿರ್ವಹಿಸುವಾಗ, ಅಧಿಕಾರಿಗಳು ಪ್ರಾಮಾಣಿಕವಾಗಿರಬೇಕಲ್ಲದೇ, ವ್ಯವಸ್ಥೆಯನ್ನು ಸರಿ ಮಾಡುವ ಪ್ರಯತ್ನವನ್ನು ಮಾಡಬೇಕು. ತಹಶೀಲ್ದಾರ್, ಸಹಾಯಕ ಆಯುಕ್ತರು ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಎಲ್ಲರಿಗೂ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು.ಬಡವರ ಬಗ್ಗೆ ಕರುಣೆಯಲ್ಲ, ಸಂವಿಧಾನ ಅವರಿಗೆ ನೀಡಿರುವ ಅವರ ಹಕ್ಕುಗಳ ರಕ್ಷಣೆ ಮಾಡುವ ಪ್ರಯತ್ನ ಮಾಡಬೇಕು ಎಂದರು.

ಅಧಿಕಾರಿಗಳ ಬೇಡಿಕೆಗಳನ್ನು ಈಡೇರಿಸುವ ಭರವಸೆ
ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡ ಪೂರ್ಣಗೊಳಿಸಲು ಹೆಚ್ಚುವರಿ ಅನುದಾನ ಒದಗಿಸಲಾಗುವುದು. ಪದೋನ್ನತಿ ಸೇರಿದಂತೆ ಸಂಘದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು.

ಈ ಸಂದರ್ಭದಲ್ಲಿ ಸಚಿವರಾದ ಈಶ್ವರ ಖಂಡ್ರೆ, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಳ್ಳಾರಿ ಗಲಾಟೆ ಪ್ರಕರಣ: 26 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್‌ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದು ಫೈರಿಂಗ್‌ ಆಗಿ ಓರ್ವ ಕಾಂಗ್ರೆಸ್‌ ಕಾರ್ಯಕರ್ತ ಸಾವನ್ನಪ್ಪಿದ್ದ ಪ್ರಕರಣಕ್ಕೆ…

29 mins ago

ನನಗೂ ದೇವರಾಜ ಅರಸು ಅವರಿಗೂ ಹೋಲಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಜನರ ಅಶೀರ್ವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘಾವಧಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ…

35 mins ago

ಗೋಣಿಕೊಪ್ಪ| ಲಾರಿ ಹಾಗೂ ಬೈಕ್‌ ನಡುವೆ ಅಪಘಾತ: ಸವಾರ ಸಾವು

ಗೋಣಿಕೊಪ್ಪ: ಲಾರಿ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ರಸ್ತೆಯ…

1 hour ago

ಅರಣ್ಯದ ಧಾರಣಾಶಕ್ತಿ ತಿಳಿಯಲೂ ಸೂಚನೆ: ಸಚಿವ ಈಶ್ವರ್ ಖಂಡ್ರೆ

ಬೀದರ್: ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಹುಲಿ ಸಂರಕ್ಷಿತ ಧಾಮ ಸೇರಿದಂತೆ ರಾಜ್ಯದ ಎಲ್ಲ ಅರಣ್ಯ ಪ್ರದೇಶದಲ್ಲಿ ಇಂದಿನಿಂದ…

1 hour ago

ನಾನು ಸಿಎಂ ಕುರ್ಚಿ ರೇಸ್‌ನಲ್ಲಿಲ್ಲ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಮೈಸೂರು: ಬಜೆಟ್ ನಂತರ ಅಧಿಕಾರ ಹಂಚಿಕೆ ನಡೆಯುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ…

2 hours ago

ತುಮಕೂರಿನಲ್ಲಿ 11 ಕೋತಿಗಳ ನಿಗೂಢ ಸಾವು: ವಿಷಪ್ರಾಶನದ ಶಂಕೆ

ತುಮಕೂರು: ತುಮಕೂರಿನಲ್ಲಿ 11 ಮಂಗಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಕಿಡಿಗೇಡಿಗಳು ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ. ದೇವರಾಯನ ದುರ್ಗ ಅರಣ್ಯ ಪ್ರದೇಶದಲ್ಲಿ…

3 hours ago