ಅಕ್ಟೋಬರ್: ‘ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ’ ಎಂದು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು.
ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು ಬಿಜೆಪಿ ಪ್ರತಿಭಟನೆ ಮಾಡುವುದರ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸುಮಾರು 200ಕ್ಕೂ ಹೆಚ್ಚು ನೋಟೀಸ್ ಗಳನ್ನು ನೀಡಿದ್ದಾರೆ. ಅವರದು ಇಬ್ಬದಿ ರಾಜಕೀಯ ನಡೆ. ಯಾವ ರೈತರನ್ನೂ ಒಕ್ಕಲೆಬ್ಬಿಸಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದೇವೆ. ಕೊಟ್ಟಿರುವ ನೋಟೀಸ್ ಗಳನ್ನು ಹಿಂಪಡೆಯಲು ಈಗಾಗಲೇ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ನವೆಂಬರ್ 4ರ ಅವರ ಪ್ರತಿಭಟನೆ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತವಾದದ್ದು, ಸಮಸ್ಯೆಗಳು ಇರದೆಡೆ ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಈಗ ಮುಡಾ ಪ್ರಕರಣದಲ್ಲಿ ಮಾಡಿಲ್ಲವೇ? ಎಂದು ಪ್ರಶ್ನಿಸಿದರು.
ಶಿಗ್ಗಾಂವಿಯಲ್ಲಿ ಅಜ್ಜಂಪೀರ್ ಖಾದ್ರಿ ಅವರು ನಾಮಪತ್ರ ವಾಪಸ್ ಪಡೆದಿದ್ದು, ಉಪಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುತ್ತಾರೆ. ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರೂ ಕ್ಷೇತ್ರಗಳಲ್ಲಿಯೂ ಗೆಲುವು ನಮ್ಮದೇ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪಾವಳಿ ಶುಭಾಶಯಗಳನ್ನು ತಿಳಿಸಿದರು.
ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…
೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…
ಅನಿಲ್ ಅಂತರಸಂತೆ ಹಳ್ಳಿ ಸೊಗಡಿನ ದೇಸಿ ಕಂಠಸಿರಿಯಲ್ಲಿ ಇವರ ಜಾನ ಪದ ಹಾಡುಗಳನ್ನು ಕೇಳುವುದೇ ಬಲು ಹಿತಕರ. ಮೂಲತಃ ಎಚ್.ಡಿ.ಕೋಟೆ…
ಇಂತಹ ಸಂದರ್ಭಗಳಲ್ಲಿ ಮೌನವಾಗಿರುವುದು ಅಪರಾಧದಲ್ಲಿ ಪಾಲುಗಾರರಾದಂತೆಯೇ ಸಂಧ್ಯಾರಾಣಿ, ಲೇಖಕಿ ಮತ್ತು ಚಿತ್ರ ಸಾಹಿತಿ ‘ರ’ ಚಿತ್ರದ ಹಾಡಿನ ಬಗ್ಗೆ ವಿರೋಧ,…
ಶೇಷಾದ್ರಿ ಗಂಜೂರು ಮಧ್ಯಪ್ರಾಚ್ಯದಿಂದ ಪ್ರತಿನಿತ್ಯ ವಿಸ್ತರಿಸುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದರೆ, ಇಸ್ರೇಲಿನ ಆಕ್ರಮಣಕಾರಿ ಧೋರಣೆ, ಅಮೆರಿಕದ ಟ್ರಂಪ್ ದುರಾಡಳಿತದ ತರ್ಕರಹಿತ ನಡೆಗಳು…
ನವೀನ್ ಡಿಸೋಜ ಮಡಿಕೇರಿ: ವನ್ಯಜೀವಿ-ಮಾನವ ಸಂಘರ್ಷ ತಡೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕ ಮಾನವ -…