ಬೆಂಗಳೂರು: ಪ್ರಸಕ್ತ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರಾದ ಬಸವರಾಜೇಂದ್ರ ಹೆಚ್. ಅವರು ಸ್ಪಷ್ಟಪಡಿಸಿದ್ದಾರೆ.
ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಆ ಸಮಿತಿಯು ನೀಡುವ ವರದಿಯಂತೆ ಕ್ರಮವಹಿಸಲಾಗುವುದು.ಹಾಗಾಗಿ ಪ್ರಸಕ್ತ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಕಳೆದ ವರ್ಷದ ಶೈಕ್ಷಣಿಕ ಸಾಲಿನಂತೆಯೇ ಮುಂದುವರಿಸಲಾಗಿದ್ದು, ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು. ಈ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಗೊಂದಲ ಹಾಗೂ ಆತಂಕಕ್ಕೆ ಒಳಗಾಗಬಾರದು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…