ಬೆಂಗಳೂರು: ಸಿಎಂ ಬದಲಾವಣೆ ಪ್ರಶ್ನೆ ಹೈಕಮಾಂಡ್ ಮುಂದೆಯೂ ಇಲ್ಲ. ಶಾಸಕಾಂಗ ಸಭೆಯ ಮುಂದೆಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಬ್ಯಾಟಿಂಗ್ ಮಾಡಿದ್ದಾರೆ.
ಕಾಂಗ್ರೆಸ್‌ನಲ್ಲಿ ಹೈಕಮಾಂಡ್ ಸೂಚನೆ ಬೆನ್ನಲ್ಲೂ ಸಿಎಂ ಬದಲಾವಣೆ ಚರ್ಚೆ ಆಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಪಕ್ಷದಲ್ಲಿ ಒಗ್ಗಟ್ಟಿದೆ. ನನಗೆ ನಮ್ಮ ಪಕ್ಷದಲ್ಲಿ ಭಿನ್ನಾಭಿಪ್ರಾಯ ಇರೋದು ಕಂಡುಬಂದಿಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕೆಲವರು ಡಿಕೆಶಿ ಸಿಎಂ ಆಗಬೇಕು ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಡಿಕೆಶಿ ಅಭಿಮಾನಿಗಳು ಸಹ ಹೇಳುತ್ತಿದ್ದಾರೆ. ಅದಕ್ಕೆ ಡಿಕೆಶಿ ಏನು ಮಾಡಲು ಆಗುತ್ತದೆ. ಸಿಎಂ ಬದಲಾವಣೆ ಪ್ರಶ್ನೆ ಹೈಕಮಾಂಡ್ ಮುಂದೆಯೂ ಇಲ್ಲ. ಶಾಸಕಾಂಗ ಸಭೆಯ ಮುಂದೆಯೂ ಚರ್ಚೆ ಆಗುತ್ತಿಲ್ಲ. ಹೈಕಮಾಂಡ್ ಹೇಳಿದ ಮೇಲೆ ಮಾತನಾಡುತ್ತಿದ್ದಾರೆ. ಸಿಎಂ ವಿರುದ್ಧ ಮಾತನಾಡುವವರ ವಿರುದ್ಧ ಹೈಕಮಾಂಡ್ ಕ್ರಮ ತೆಗೆದುಕೊಳ್ಳಬೇಕು. ನಮ್ಮ ಹೈಕಮಾಂಡ್ ಸ್ಟ್ರಾಂಗ್ ಇದೆ. ಈಗ ಮತ್ತಷ್ಟು ಸ್ಟ್ರಾಂಗ್ ಆಗಿದೆ ಎಂದು ಹೇಳಿದರು.