ರಾಜ್ಯ

ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ: ಮಾಜಿ ಸಚಿವ ಆರ್.ವಿ.ದೇಶಪಾಂಡೆ

ಬೆಂಗಳೂರು: ಸಿಎಂ ಬದಲಾವಣೆ ಪ್ರಶ್ನೆ ಹೈಕಮಾಂಡ್‌ ಮುಂದೆಯೂ ಇಲ್ಲ. ಶಾಸಕಾಂಗ ಸಭೆಯ ಮುಂದೆಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಮಾಜಿ ಸಚಿವ ಆರ್.‌ವಿ.ದೇಶಪಾಂಡೆ ಬ್ಯಾಟಿಂಗ್‌ ಮಾಡಿದ್ದಾರೆ.

ಕಾಂಗ್ರೆಸ್‌ನಲ್ಲಿ ಹೈಕಮಾಂಡ್‌ ಸೂಚನೆ ಬೆನ್ನಲ್ಲೂ ಸಿಎಂ ಬದಲಾವಣೆ ಚರ್ಚೆ ಆಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಪಕ್ಷದಲ್ಲಿ ಒಗ್ಗಟ್ಟಿದೆ. ನನಗೆ ನಮ್ಮ ಪಕ್ಷದಲ್ಲಿ ಭಿನ್ನಾಭಿಪ್ರಾಯ ಇರೋದು ಕಂಡುಬಂದಿಲ್ಲ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕೆಲವರು ಡಿಕೆಶಿ ಸಿಎಂ ಆಗಬೇಕು ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಡಿಕೆಶಿ ಅಭಿಮಾನಿಗಳು ಸಹ ಹೇಳುತ್ತಿದ್ದಾರೆ. ಅದಕ್ಕೆ ಡಿಕೆಶಿ ಏನು ಮಾಡಲು ಆಗುತ್ತದೆ. ಸಿಎಂ ಬದಲಾವಣೆ ಪ್ರಶ್ನೆ ಹೈಕಮಾಂಡ್‌ ಮುಂದೆಯೂ ಇಲ್ಲ. ಶಾಸಕಾಂಗ ಸಭೆಯ ಮುಂದೆಯೂ ಚರ್ಚೆ ಆಗುತ್ತಿಲ್ಲ. ಹೈಕಮಾಂಡ್‌ ಹೇಳಿದ ಮೇಲೆ ಮಾತನಾಡುತ್ತಿದ್ದಾರೆ. ಸಿಎಂ ವಿರುದ್ಧ ಮಾತನಾಡುವವರ ವಿರುದ್ಧ ಹೈಕಮಾಂಡ್‌ ಕ್ರಮ ತೆಗೆದುಕೊಳ್ಳಬೇಕು. ನಮ್ಮ ಹೈಕಮಾಂಡ್ ಸ್ಟ್ರಾಂಗ್‌ ಇದೆ. ಈಗ ಮತ್ತಷ್ಟು ಸ್ಟ್ರಾಂಗ್‌ ಆಗಿದೆ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

5 mins ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

7 mins ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

9 mins ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

11 mins ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

18 mins ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

24 mins ago