ಬೆಂಗಳೂರು: ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಗುಸು ಗುಸು ಎನ್ನುತ್ತಿರುವ ವಿಚಾರ ಹಾಗೂ ಮೈಸೂರು ಮುಡಾ ಹಗರಣ ಕುರಿತಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು, ಸಿಎಂ ಕುರ್ಚಿ ಖಾಲಿ ಇದ್ದರೆ ತಾನೇ ಸಿಎಂ ಹುದ್ದೆ ಬಗ್ಗೆ ಚರ್ಚೆ ಮಾಡಬೇಕಿರೋದು ಎಂದು ಖಾರವಾಗಿ ನುಡಿದಿದ್ದಾರೆ.
ಮುಂದುವರಿದು ಮಾತನಾಡಿದ ಅವರು, ಯಾವ ಕಾರಣಕ್ಕೆ ಸರ್ಕಾರ ಬೀಳುತ್ತೆ ಅಂತಾ ನೀವೇ ಹೇಳಿ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು. ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯರ ಯಾವುದೇ ಪಾತ್ರ ಇಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲೇ ಬದಲಿ ಸೈಟ್ ಕೊಡಲಾಗಿದೆ. ಈಗಲೂ ಸಿಎಂ ಸಿದ್ದರಾಮಯ್ಯರಿಗೆ ಯಾವುದೇ ಕಪ್ಪು ಚುಕ್ಕೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದರು.
ಇನ್ನೂ ಬಿಜೆಪಿಯವರಿಗೆ ಮಾಡಲು ಏನೂ ಕೆಲಸ ಇಲ್ಲ. ಅದಕ್ಕಾಗಿಯೇ ಏನಾದರೂ ವಿಷಯ ಇಟ್ಟುಕೊಂಡು ಅದನ್ನೇ ದೊಡ್ಡ ಸುದ್ದಿ ಮಾಡುತ್ತಿದ್ದಾರೆ. ಕುಮಾರಸ್ವಾಮಿಗೆ ಸಿದ್ದರಾಮಯ್ಯರನ್ನು ಕಂಡರೆ ಆಗಲ್ಲ. ಅದಕ್ಕಾಗಿಯೇ ಸಿದ್ದರಾಮಯ್ಯರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…