ರಾಜ್ಯ

ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಆರ್.‌ಅಶೋಕ್‌

ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಈ ವರೆಗೂ ನಿರ್ಧಾರವಾಗಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ನಾವು ಏಕ ಪಕ್ಷಿಯಾಗಿ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ.ನಮ್ಮ ಮಿತ್ರ ಪಕ್ಷ ಜೆಡಿಎಸ್ ಜೊತೆ ಮಾತುಕತೆ ನಡೆಸಬೇಕು ಈವರೆಗೂ ಯಾವುದೇ ನಿರ್ಧಾರ ಆಗಿಲ್ಲ ಎಂದು ಪುನರುಚ್ಚರಿಸಿದರು.

ಅಧಿವೇಶನದಲ್ಲಿ ನಾವು ವಿಶೇಷವಾಗಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸರ್ಕಾರದ ಗಮನ ಸೆಳೆಯಲಿದ್ದೇವೆ. ಹೀಗಾಗಿ ಸರ್ಕಾರದ ವಿರುದ್ಧ ನಿಲುವಳಿ ಸೂಚನೆ ಮಂಡಿಸುತ್ತೇವೆ. ಈ ಭಾಗದ ಸಮಸ್ಯೆಗಳಿಗೆ ಸರ್ಕಾರ ಪರಿಹಾರ ಒದಗಿಸಬೇಕೆಂದು ಮನವಿ ಮಾಡಿದರು.

ಇದನ್ನು ಓದಿ : ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಉಪ ಲೋಕಾಯುಕ್ತ ನ್ಯಾಯಮೂರ್ತಿ ಬೀರಪ್ಪ ಅವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ 63% ಕಮೀಷನ್ ಎಂದು ಹೇಳಿಲ್ಲ. ನಾನು ಅವರ ಎಲ್ಲಾ ಹೇಳಿಕೆಯನ್ನು ಕೂಲಂಕುಶವಾಗಿ ಪರಿಶೀಲಿಸಿದ್ದೇನೆ. 2019ರ ಸರ್ಕಾರ ಎಂದೂ ಕೂಡಾ ಅವರು ಹೇಳಿಲ್ಲ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಿಯಾಗಿ ನೋಡಲಿ ಎಂದು ತಿರುಗೇಟು ನೀಡಿದರು.

ನನ್ನ ತಿಳುವಳಿಕೆ ಪ್ರಕಾರ ಉಪಲೋಕಾಯುಕ್ತರು ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಎಂದು ಹೇಳಿಲ್ಲ. ಸಚಿವ ಎಂಬಿ ಪಾಟೀಲ್ ಮೊದಲು ತಮ್ಮ ಇಲಾಖೆಯಲ್ಲಿ ಏನು ನಡೆಯುತ್ತದೆ ಎಂಬುದನ್ನು ಸರಿಯಾಗಿ ನೋಡಿಕೊಳ್ಳಲಿಲ್ಲ. ಈ ವಿಷಯದಲ್ಲಿ ಅವರು ಮೂಗು ತೂರಿಸುವ ಅಗತ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆ ಈ ಹಿಂದೆ ಕಾಡುಗಳ್ಳ ವೀರಪ್ಪನ್ ಇದ್ದಾಗ ಆನೆಗಳ ಸಾವಿನ ಪ್ರಮಾಣ ಕಡಿಮೆ ಇತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆನೆಗಳ ಸಾವು ಹೆಚ್ಚಾಗುತ್ತಿದೆ. ಕಾಂಗ್ರೆಸ್ ಪಕ್ಷಕ್ಕಿಂತ ವೀರಪ್ಪನ್ ಕಾಲವೇ ಆನೆಗಳಿಗೆ ಚೆನ್ನಾಗಿತ್ತು. ರಾಜ್ಯದಲ್ಲಿ ಆನೆ ಮತ್ತು ಮಾನವ ಸಂಘರ್ಷ ಹೆಚ್ಚಾಗಿದೆ. ಕಾಂಗ್ರೆಸ್ ಅಧಿಕಾರವಧಿಯಲ್ಲಿ ಜಂಗಲ್ ರಾಜ್ ನಡೆಯುತ್ತದೆ ಎಂದು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

3 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

3 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

3 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

4 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

4 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

5 hours ago