ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡರ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ್ದರು. ಎಫ್‌ಐಆರ್ ದಾಖಲಾದ ತಕ್ಷಣ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ. ಎಫ್‌ಐಆರ್ ದಾಖಲಾದವರೆಲ್ಲಾ ರಾಜೀನಾಮೆ ಕೊಟ್ಟಿದ್ದಾರಾ ಎಂದು ಪ್ರಶ್ನೆ ಮಾಡಿದ್ದರು.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಕಳೆದ ವಾರವಷ್ಟೇ ಜಿ.ಟಿ.ದೇವೇಗೌಡ ಸಿದ್ದರಾಮಯ್ಯ ವಿರುದ್ಧ ಮಾತನಾಡಿದ್ದರು. ಈಗ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಪರ ಮಾತನಾಡಿದ್ದಾರೆ. ಅವರ ಹೇಳಕೆಯಿಂದ ಬಿಜೆಪಿಗೆ ಯಾವುದೇ ಡ್ಯಾಮೇಜ್ ಆಗಲ್ಲ ಎಂದರು.
ಇನ್ನು ರಾಜ್ಯ ಸರ್ಕಾರದ ವಿರುದ್ಧ ಸಾಲು ಸಾಲು ಹಗರಣಗಳು ಕೇಳಿಬಂದಿವೆ. ಇಂತಹ ಸಮಯದಲ್ಲಿ ಜಿ.ಟಿ.ದೇವೇಗೌಡರ ಹೇಳಿಕೆ ಸರಿಯಲ್ಲ. ಸ್ಥಾನಮಾನ ಸಿಗದಿದ್ದಕ್ಕೆ ಪಕ್ಷದ ವಿರುದ್ಧ ಮಾತನಾಡಿದ್ದಾರೆ ಎಂದು ಕಿಡಿಕಾರಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…