ಬೆಂಗಳೂರು: ರಾಜ್ಯದ ಕೆಲ ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿ ಬಗ್ಗೆ ಪರಿಶೀಲನೆ ನಡೆಸಲು ಉಪಸಮಿತಿ ರಚನೆ ಮಾಡಲಾಗಿದೆ.
ಆದ್ದರಿಂದ ಉಪಸಮಿತಿ ವರದಿ ಕೊಡುವುದು ಇನ್ನೂ ಬಾಕಿಯಿದ್ದು, ವರದಿ ಬರುತ್ತಿದ್ದಂತೆ ಅದನ್ನು ಸಂಪುಟದ ಮುಂದೆ ಇಟ್ಟು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಈ ಎಲ್ಲಾ ವರದಿ ಬರುವ ಮೊದಲೇ ಸುಖಾಸುಮ್ಮನೆ ವಿಶ್ವವಿದ್ಯಾನಿಲಯಗಳನ್ನು ಮುಚ್ಚುತ್ತೇವೆ ಎನ್ನುವುದು ಸರಿಯಲ್ಲ. ಇಂತಹ ತೀರ್ಮಾನ ನಮ್ಮಿಂದ ಆಗಿಲ್ಲ ಎಂದು ಸ್ಪಷ್ಟನೆ ನೀಡಿದರು.
ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ನಿಲುವಿಗೆ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ ಸಿಕ್ಕಿದ್ದು, ವಿವಿ ಬಂದ್ ಮಾಡುವುದು ಬೇಡ ಎಂದು ಪದೇ ಪದೇ ಆಗ್ರಹಿಸಿ ಪ್ರತಿಭಟನೆಗಿಳಿದಿದ್ದ ಜನರು ಈಗ ಫುಲ್ ಖುಷ್ ಆಗಿದ್ದಾರೆ.





