Mysore
25
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

DCM D.K. Shivakumar says there will be a big revolution in the state by 2028

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ನವದೆಹಲಿಯಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ರಾಜ್ಯ ರಾಜಕೀಯ ಹಾಗೂ ಪ್ರಮುಖ ಬೆಳವಣಿಗೆಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ. ಲೋಕಸಭೆ ಚುನಾವಣೆಯಲ್ಲಿ ಎಸ್‌ಟಿ ಮೀಸಲು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆದ್ದಿರುವುದನ್ನು ಸಹಿಸದೆ ಬಿಜೆಪಿ ಈ ರೀತಿ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.

ನಾಗೇಂದ್ರ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಪಕ್ಷದ ನಿಷ್ಠಾವಂತ ಆಸ್ತಿಯಾಗಿದ್ದಾರೆ. ಪಕ್ಷದ ಹಿತಕ್ಕಾಗಿ ಅವರು ಯಾವುದೇ ತ್ಯಾಗಕ್ಕೂ ಸಿದ್ಧರಿದ್ದಾರೆ. ಹೈಕಮಾಂಡ್ ಮುಂದೆ ವಾಸ್ತವಾಂಶಗಳನ್ನು ಮಂಡಿಸಿದ್ದು, ಅಂತಿಮ ನಿರ್ಧಾರವನ್ನು ವರಿಷ್ಠರೇ ತೆಗೆದುಕೊಳ್ಳಲಿದ್ದಾರೆ ಎಂದರು.

ಇದೇ ವೇಳೆ, ವಿಧಾನಸಭೆಯಲ್ಲಿ ಚರ್ಚೆಯಿಂದ ವಿಪಕ್ಷಗಳು ಓಡಿಹೋಗಿವೆ ಎಂದು ವ್ಯಂಗ್ಯವಾಡಿದ ಅವರು, ಭೋವಿ ನಿಗಮದ ಹಗರಣ ಸೇರಿದಂತೆ ತಮ್ಮ ಅವಧಿಯ ಹಗರಣಗಳು ಬಯಲಾಗುವ ಭಯದಿಂದಲೇ ಬಿಜೆಪಿ ನಾಯಕರು ಪಾದಯಾತ್ರೆ ಹಾಗೂ ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ ಎಂದು ಟೀಕಿಸಿದರು.

ನೇಪಾಳ ಜಲಪ್ರಳಯದಲ್ಲಿ ಕನ್ನಡಿಗರ ರಕ್ಷಣೆ
ನೇಪಾಳ-ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸಕ್ರಿಯವಾಗಿ ಕಾರ್ಯಪ್ರವೃತ್ತವಾಗಿದೆ. ಪ್ರವಾಹದಲ್ಲಿ ಸಿಲುಕಿರುವವರ ನಿಖರ ವಿವರ ಕಲೆಹಾಕಲಾಗುತ್ತಿದ್ದು, ಸದ್ಯ ಕಲಬುರಗಿ ಮೂಲದ ಇಬ್ಬರು ಯಾತ್ರಿಕರೊಂದಿಗೆ ಮಾತನಾಡಿದ್ದೇನೆ. ಎಲ್ಲರನ್ನೂ ಆದಷ್ಟು ಬೇಗ ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ:
ರಾಜ್ಯದಲ್ಲಿ ಶಿಕ್ಷಣ ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ತರಲು ಮತ್ತು ನೇಮಕಾತಿ ಅಕ್ರಮಗಳನ್ನು ತಡೆಯಲು ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದೆ. ಪರೀಕ್ಷೆಗಳು ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ತಜ್ಞರಿಂದ ಸೂಕ್ತ ಸಲಹೆಗಳನ್ನು ಪಡೆಯಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

Tags:
error: Content is protected !!