cm siddaramaiah
ಬೆಂಗಳೂರು : ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಟೌನ್ ಹಾಲ್ ನಲ್ಲಿ ಆಯೋಜಿಸಿದ್ದ ಬೃಹತ್ “ಜೈ ಹಿಂದ್ ಸಭಾ” ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋದ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನಿಸಿ ಪುರಸ್ಕರಿಸಿ ಮಾತನಾಡಿದರು.
ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ. 140 ಕೋಟಿ ಭಾರತೀಯರ ಜವಾಬ್ದಾರಿ ಎಂದರು.
ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ತನ್ನ ಇತಿಹಾಸದಲ್ಲೇ ಯಾವತ್ತೂ ರಾಜಿ ಆಗಿಲ್ಲ. ಮುಂದೆಯೂ ಆಗುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ ಎಂದು ಶ್ಲಾಘಿಸಿದರು.
ಸಿಎಂ ಮಹತ್ವದ ಘೋಷಣೆ
ಯೋಧರ ಕ್ಯಾಂಟೀನ್ ಗೆ ಅಬಕಾರಿ ಸುಂಕ ಹಾಕುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಘೋಷಣೆ ಮಾಡಿದರು. ಹಾಗೆಯೇ ನಿವೃತ್ತ ಯೋಧರ ಕಲ್ಯಾಣಕ್ಕೆ ಅಗತ್ಯ ಕ್ರಮಗಳನ್ನೆಲ್ಲಾ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…
ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…
ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…