Sharan Prakash Patil
ಬೆಂಗಳೂರು : ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ.
ಈ ವಿಷಯವನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಖಾಸಗಿ ವೈದ್ಯಕೀಯ ಕಾಲೇಜು ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಈ ವಿಷಯವನ್ನು ಶನಿವಾರ ಸ್ಪಷ್ಟಪಡಿಸಿದರು.
ಖಾಸಗಿ ಕಾಲೇಜುಗಳು 10% ರಿಂದ 15% ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ದವು. ಆದರೆ ರಾಜ್ಯ ಸರ್ಕಾರದ ಕಳೆದ ವರ್ಷ 10% ಹೆಚ್ಚಳಕ್ಕೆ ಅನುಮತಿ ನೀಡಿತ್ತು. ಆದರೆ ಈ ವರ್ಷ ಯಾವುದೇ ಹೆಚ್ಚಳಕ್ಕೆ ಅವಕಾಶವಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಈ ವಿಷಯವನ್ನು ಸಭೆಯಲ್ಲಿ ಪ್ರಸ್ತಾಪಿಸಿದಾಗ ಕೂಡಲೇ ಪ್ರತಿಕ್ರಿಯೆ ನೀಡಿದ ಸಚಿವ ಶರಣ್ ಪ್ರಕಾಶ್ ಪಾಟೀಲ್, ಕಳೆದ ವರ್ಷ 10% ಶುಲ್ಕ ಹೆಚ್ಚಳವಾಗಿತ್ತು. ಈ ವರ್ಷದಲ್ಲಿ ಯಾವುದೇ ಹೆಚ್ಚಳವಿಲ್ಲ. ಈ ಕುರಿತು ಒಪ್ಪಂದಕ್ಕೆ ಅತಿ ಶೀಘ್ರದಲ್ಲೇ ಸಹಿ ಹಾಕಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…