ರಾಜ್ಯ

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ

 

ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ, ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳ ಶುಲ್ಕವನ್ನು ಹೆಚ್ಚಳ ಮಾಡದೇ ಯಥಾಸ್ಥಿತಿಯನ್ನೇ ಮುಂದುವರೆಸುವ ಮಹತ್ವ ತೀರ್ಮಾನವನ್ನು ರಾಜ್ಯಸರ್ಕಾರ ತೆಗೆದುಕೊಂಡಿದೆ.

ಸರ್ಕಾರದ ಇಂತಹ ನಿರ್ಧಾರದಿಂದಾಗಿ ಈ ಬಾರಿ ವೈದ್ಯಕೀಯ, ದಂತ ವೈದ್ಯಕೀಯ, ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳ ಶುಲ್ಕ ಹಚ್ಚಳವಾಗುತ್ತದೆ ಎಂಬ ಆತಂಕದಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರು ನೆಮದಿಯ ನಿಟ್ಟುಸಿರು ಬಿಡುವಂತಾಗಿದೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಅವರ ಅಧ್ಯಕ್ಷತೆಯಲ್ಲಿ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜು ಆಡಳಿತ ಮಂಡಳಿಯವರೊಂದಿಗೆ ಶುಕ್ರವಾರ ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲರು, ಖಾಸಗಿ ಕಾಲೇಜು ಆಡಳಿತ ಮಂಡಳಿಗಳ ಶುಲ್ಕವನ್ನು ಹೆಚ್ಚಳ ಮಾಡಬೇಕೆಂಬ ಪ್ರಸ್ತಾವನೆಯನ್ನು ನಾವು ಒಪ್ಪಿಕೊಂಡಿಲ್ಲ. ಈ ಹಿಂದೆ ಅಂದರೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿದ್ದ ಶುಲ್ಕವು ಯಥಾಸ್ಥಿತಿಯಲ್ಲೇ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದರು.

ಪೋಷಕರು ಮತ್ತು ವಿದ್ಯಾರ್ಥಿಗಳು ಶುಲ್ಕ ಹೆಚ್ಚಳವಾಗುತ್ತದೆ ಎಂಬ ಆತಂಕಕ್ಕೆ ಒಳಗಾಗಬಾರದು. ಈಗಾಗಲೇ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ನಡೆದಿದ್ದ ನೀಟ್‌ ಪ್ರವೇಶ ಪರೀಕ್ಷೆ ರದ್ದಾಗಿ ಮರುಪರೀಕ್ಷೆ ನಡೆಯಬೇಕಿರುವುದರಿಂದ ಒತ್ತಡಕ್ಕೆ ಒಳಗಾಗಿದ್ದಾರೆ. ಇಂತಹ ಸಮಯದಲ್ಲಿ ಶುಲ್ಕ ಹೆಚ್ಚಳ ಮಾಡುವುದು ಸರಿಯಲ್ಲ ಎಂಬ ತೀರ್ಮಾನ ಮಾಡಲಾಗಿದೆ.

ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜು ಮಂಡಳಿಯವರು ಶುಲ್ಕ ಹೆಚ್ಚಳ ಮಾಡುವ ಪ್ರಸ್ತಾವನೆಗೆ ನಾವು ಅವಕಾಶವನ್ನೇ ಕೊಟ್ಟಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ರೀತಿಯ ಊಹಾಪೋಹಕ್ಕೆ ಕಿವಿಗೊಡಬಾರದು ಎಂದು ಸಚಿವ ಶರಣಪ್ರಕಾಶ್‌ ಪಾಟೀಲ್‌ ಮನವಿ ಮಾಡಿದರು.

ಶುಲ್ಕ ಸ್ಥಿರತೆ

ಕಳೆದ ಸಾಲಿನಲ್ಲಿ ನಿಗದಿಪಡಿಸಿದ್ದ ಶುಲ್ಕವನ್ನೇ ಈ ಸಾಲಿನಲ್ಲೂ ಮುಂದುವರಿಸಲಾಗುವುದು. ಈ ನಿಯಮವು ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳೆರಡಕ್ಕೂ ಅನ್ವಯಿಸುತ್ತದೆ. ಈ ನಿರ್ಧಾರದಿಂದಾಗಿ ಪ್ರವೇಶ ಪಡೆಯಲಿರುವ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆ ತಪ್ಪಿದಂತಾಗಿದೆ.

ಶುಲ್ಕ ವಿವರ

ಎಂಬಿಬಿಎಸ್‌‍ 

ಸರ್ಕಾರಿ ಕಾಲೇಜು – 55,000 ರೂ.
ಕೆಪಿಸಿಎಫ್‌ ಸರ್ಕಾರಿ ಕೋಟ – 1,41,621 ರೂ.
ಕೆಆರ್‌ಎಲ್‌ಎಂಪಿಸಿಎ ಸರ್ಕಾರಿ ಕೋಟ – 1,41,621 ರೂ.
ಎಎಂಪಿಸಿಕೆ ಸರ್ಕಾರಿ ಕೋಟ – 1,41,621 ರೂ.

ಖಾಸಗಿ ವಿಶ್ವವಿದ್ಯಾನಿಲಯಗಳ
ಸರ್ಕಾರಿ ಕೋಟ
1,41,621 ರೂ.
ಕೆಪಿಸಿಎಫ್‌ ಖಾಸಗಿ ಕೋಟ – 11,88,167 ರೂ.
ಕೆಆರ್‌ಎಲ್‌ಎಂಪಿಸಿಎ ಖಾಸಗಿ ಕೋಟ – 11,88,167 ರೂ.
ಎಎಂಪಿಸಿಕೆ ಖಾಸಗಿ ಕೋಟ – 11,88,167 ರೂ.

ದಂತ ವೈದ್ಯಕೀಯ :

ಸರ್ಕಾರಿ ಕಾಲೇಜುಗಳ ಕೋಟ – 40,000 ರೂ.
ಕೆಪಿಸಿಎಫ್‌ ಸರ್ಕಾರಿ ಕೋಟ – 83,358 ರೂ.
ಕೆಆರ್‌ಎಲ್‌ಎಂಪಿಸಿಎ ಸರ್ಕಾರಿ ಕೋಟ – 83,358 ರೂ.
ಎಎಂಪಿಸಿಕೆ ಸರ್ಕಾರಿ ಕೋಟ – 83,358 ರೂ.

ಖಾಸಗಿ ಕೋಟ :
ಕೆಪಿಸಿಎಫ್‌ ಖಾಸಗಿ ಕೋಟ – 7,32,625 ರೂ.
ಕೆಆರ್‌ಎಲ್‌ಎಂಪಿಸಿಎ ಖಾಸಗಿ ಕೋಟ – 7,32,625 ರೂ.
ಎಎಂಪಿಸಿಕೆ ಖಾಸಗಿ ಕೋಟ – 7,32,625 ರೂ.

ಸಭೆಯಲ್ಲಿ ಕಲಬುರಗಿ ಸಂಸದ ರಾಧಾಕೃಷ್ಣ, ದಂತ ವೈದ್ಯಕೀಯ ಕಾಲೇಜುಗಳ ಪರವಾಗಿ ವಿಧಾನಪರಿಷತ್‌ ಸದಸ್ಯ ನಾಗರಾಜ್‌ ಯಾದವ್‌, ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮದ್‌ ಮೋಸಿನ್‌, ಎಂ.ಎಸ್‌‍.ರಾಮಯ್ಯ ಕಾಲೇಜಿನ ಜಯರಾಂ ಹಾಗೂ ವಿವಿಧ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

4 mins ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

5 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

5 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

5 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

5 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

5 hours ago