ಬೆಂಗಳೂರು : ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಆಂತರಿಕ ಜಗಳವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಪಕ್ಷದಲ್ಲಿ ಆಂತರಿಕ ಜಗಳ ಇರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ ಎಂದರು.
ಹೇಳಿಕೆ ನಿರ್ಲಕ್ಷಿಸಿ
ಸಚಿವ ರಾಜಣ್ಣ ಅವರ ಹೇಳಿಕೆಯನ್ನು ಹೇಗೆ ಅರ್ಥೈಸಿಕೊಳ್ಳಬೇಕೆಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅದನ್ನು ನಿರ್ಲಕ್ಷಿಸುವುದು ಒಳ್ಳೆಯದು ಎಂದು ತಿಳಿಸಿದರು.




